ವಿಧಾನ ಪರಿಷತ್ ಒಂದು ಸ್ಥಾನ ಉಡುಪಿ ಮುಸ್ಲಿಮರಿಗೆ ನೀಡಲು ಜಿಲ್ಲಾ ಕಾಂಗ್ರಸ್ ಅಲ್ಪಸಂಖ್ಯಾತ ವಿಭಾಗ ಆಗ್ರಹ
ಉಡುಪಿ, ಜೂ.14: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂ.29ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬಹುದಾದ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದವರಿಗೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರಸ್ ಅಲ್ಪ ಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಎಂ.ಪಿ.ಮೊಯ್ದಿನಬ್ಬ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ಇಬ್ಬರೂ ನಾಯಕರಿಗೆ ಮನವಿಯೊಂದನ್ನು ಸಲ್ಲಿಸಿ, ಉಡುಪಿ ಜಿಲ್ಲೆಯಲ್ಲಿ ಬಹಳಷ್ಟು ಹಿರಿಯ ಕಾರ್ಯಕರ್ತರು ಹಲವಾರು ವರ್ಷ ಗಳಿಂದ ಪಕ್ಪಕ್ಕೆ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದು ಜಿಲ್ಲೆಯ ಬಹುತೇಕ ಮುಸ್ಲಿಂ ಸಮೂದಾಯದ ಮತದಾರರು ತಲತಲಾಂತರ ದಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವುದರಿಂದ ಆ ಸಮೂದಾಯಕ್ಕೆ ಗೌರವ ಹಾಗೂ ಕೃತಜ್ಞತೆ ಸಲ್ಲಿಸುವ ದೃಷ್ಟಿಯಿಂದ ಮುಸ್ಲಿಂ ಸಮುದಾಯದ ಹಿರಿಯ ಹಾಗೂ ಸಮುದಾಯದ ಸೇವೆಯಲ್ಲಿ ತೊಡಗಿಸಿಕೊಂಡ ಕಾಂಗ್ರೆಸ್ ಕಾರ್ಯ ಕರ್ತರೊಬ್ಬರಿಗೆ ಅವಕಾಶ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ





