ಮಂಗಳೂರು: ಮಹಿಳೆ ಸಹಿತ ಇಬ್ಬರು ಆತ್ಮಹತ್ಯೆ
ಮಂಗಳೂರು, ಜೂ.14: ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮತ್ತು ರವಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳಾದೇವಿಯ ಉಮಾವತಿ (60) ಅವರು ಅಸೌಖ್ಯದಿಂದ ಬಳಲುತ್ತಿದ್ದು, ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಇನ್ನೊಂದು ಪ್ರಕರಣದಲ್ಲಿ ಬೋಳಾರ ಲೀವೆಲ್ ನಿವಾಸಿ ಲೋಕೇಶ್ (36) ಶನಿವಾರ ಸಂಜೆ ನೇಣು ಹಾಕಿ ಆತ್ಮಹತ್ಯೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ. ಅವರು ಯಾವುದೋ ಕಾಯಿಲೆಯಿಂದ ಹಾಗೂ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.
Next Story





