Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ...

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ

ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ15 Jun 2020 5:21 PM IST
share
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ

ಬೆಂಗಳೂರು, ಜೂ. 15: ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕ್ರೈಸ್ ವಸತಿ ಶಾಲೆಗಳಲ್ಲಿ 660 ಶಿಕ್ಷಕರು ಮತ್ತು 183 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. 993 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದಾಖಲಾತಿ ಪರಿಶೀಲನೆ ಹಂತದಲ್ಲಿರುವ ಎಲ್ಲ ಹುದ್ದೆಗಳ ನೇಮಕಾತಿಗೆ ಶಿಕ್ಷಣ ಇಲಾಖೆ ನೆರವಿನೊಂದಿಗೆ ಶೀಘ್ರವೇ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಸೂಚಿಸಿದರು.

2019-20ನೇ ಸಾಲಿನ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಶೇ.94.51ರಷ್ಟು ಗುರಿ ಸಾಧನೆಯಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ 8,911 ಘಟಕಗಳ ವಿದ್ಯುದೀಕರಣಕ್ಕೆ ಆದ್ಯತೆ ನೀಡಬೇಕು ಎಂದ ಅವರು, ಈ ಯೋಜನೆಯಡಿ 2019-20ನೆ ಸಾಲಿನಲ್ಲಿ 8,270 ಕೊಳವೆ ಬಾವಿಗಳನ್ನು ಕೊರೆಸಿದ್ದು, ಬಹುತೇಕ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಐರಾವತ ಯೋಜನೆಯಡಿ ಟ್ಯಾಕ್ಸಿ ವಿತರಣೆ ನಗರ ಪ್ರದೇಶದಲ್ಲಿ ಮಾತ್ರ ಯಶಸ್ವಿಯಾಗುತ್ತಿದೆ. ಇತರ ಪ್ರದೇಶಗಳಲ್ಲಿ ಸರಕು ಸಾಗಣೆ ವಾಹನಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದ ಅವರು, ಲಿಡ್ಕರ್ ಮೂಲಕ ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ 11,772 ಚರ್ಮ ಕುಶಲಕರ್ಮಿಗಳಿಗೆ ತಲಾ 5 ಸಾವಿರ ರೂ.ನೆರವು ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿನ 42 ಸಾವಿರಕ್ಕೂ ಹೆಚ್ಚು ಜನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಅವರಿಗೆ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮುಂದಿನ ದಿನಗಳಲ್ಲಿ ವಸತಿ ಶಾಲೆಗಳು ಮತ್ತು ಹಾಸ್ಟೆಲ್‍ಗಳು ಕಾರ್ಯಾರಂಭ ಮಾಡಿದರೆ ಸೂಕ್ತ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಅಧಿಕಾರಿಗಳು ವಿವರ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರನಾಯಕ್ ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮುನ್ನಚ್ಚರಿಕೆ:

ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ಕಾರ್ಯಾರಂಭ ಮಾಡಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಎಲ್ಲ ರೀತಿಯ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು'

-ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X