Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ...

ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ15 Jun 2020 6:30 PM IST
share
ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜೂ.15: ಜಿಲ್ಲೆಯಲ್ಲಿ ಜೂನ್ 25ರಿಂದ ಪ್ರಾರಂಭಗೊಳ್ಳುವ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗೆ ಒಟ್ಟು 14,034 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಿಕೊಂಡು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು 507 ವಿದ್ಯಾರ್ಥಿಗಳು ನೊಂದಾಯಿಸಿ ಕೊಂಡಿದ್ದು, ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡು 82 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಎಸೆಸೆಲ್ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ 12 ಕೇಂದ್ರಗಳನ್ನು ಕಾಯ್ದಿರಿಸ ಲಾಗಿದೆ. ಕನ್ನಡ ಮಾಧ್ಯಮದಲ್ಲಿ 4014 ಬಾಲಕರು ಮತ್ತು 3295 ಬಾಲಕಿ ಯರು, ಇಂಗ್ಲೀಷ್ ಮಾಧ್ಯಮದಲ್ಲಿ 3321 ಬಾಲಕರು ಮತ್ತು 3404 ಬಾಲಕಿ ಯರು ಸೇರಿದಂತೆ ಒಟ್ಟು 7335 ಬಾಲಕರು ಮತ್ತು 6699 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣ ಸ್ಯಾನಟೈಸ್ ಮಾಡಲಾಗಿದೆ. ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಟೈಸ್ ಮಾಡಲಾಗುವುದು. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್‌ಗಳನ್ನು ಉಚಿತವಾಗಿ ವಿತರಿಸಲಾಗಿದೆ. ಡಾ.ಜಿ.ಶಂಕರ್ ಟ್ರಸ್ಟ್ ವತಿಯಿಂದ 15,000, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ 13,460 ಹಾಗೂ ಭಾರತ್ ವಿಕಾಸ್ ಟ್ರಸ್ಟ್ ವತಿಯಿಂದ 8,000 ಮಾಸ್ಕ್ ಪೂರೈಕೆಯಾಗಿದೆ. ಪ್ರತೀ ಕೇಂದ್ರದಲ್ಲಿ ಸುರಕ್ಷತಾ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದವರು ವಿವರಿಸಿದರು.

ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ಮಾಡಲು ಸಿದ್ದತೆ ಮಾಡಿಕೊಂಡಿದ್ದು, ಪ್ರತೀ ಕೇಂದ್ರಕ್ಕೆ 4 ಮಂದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ವಯಂಸೇವಕರನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆ ಇಬ್ಬರು ಸಿಬ್ಬಂದಿಗಳು ಪ್ರತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದು, ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯಾವುದೇ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗುವುದರಿಂದ ವಂಚಿತನಾಗದಂತೆ ಸೂಕ್ತ ಸಾರಿಗೆ ಸೌಲ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪ್ರತಿಯೊಬ್ಬ ವಿದ್ಯಾರ್ಥಿ ಪರೀಕ್ಷಾ ಕೇಂದ್ರಕ್ಕೆ ಬರಲು ಯಾವ ಸಾರಿಗೆ ಬಳಸುತ್ತಾರೆ ಎಂಬ ಬಗ್ಗೆ 2 ದಿನದಲ್ಲಿ ಸಂಪೂರ್ಣ ಮಾಹಿತಿ ನೀಡುವಂತೆ ಹಾಗೂ ಅಗತ್ಯವಿರುವಡೆಗಳಲ್ಲಿ ಖಾಸಗಿ ಶಾಲೆಗಳ ಬಸ್‌ಗಳನ್ನು ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಖಾಸಗಿ ಬಸ್‌ಗಳು ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಯಾಗದಂತೆ ನಿಗದಿತ ಸಮಯಕ್ಕೆ ಸರಿಯಾಗಿ ಓಡಾಟ ನಡೆಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಅಗತ್ಯವಿರುವಡೆಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಹೇಳಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ಖಾಸಗಿ ಬಸ್ ಸಂಘಟನೆಗಳ ಪ್ರಮುಖರು ತಿಳಿಸಿದರು.

ಕಂಟೋನ್ಮೆಂಟ್ /ಸೀಲ್‌ಡೌನ್ ಪ್ರದೇಶದಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡುವಂತೆ ಸೂಚಿಸಿದ ಜಿ. ಜಗದೀಶ್, ಈ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾ ಗಲು ಮನೆಯಿಂದ ಹೊರಬರಲು ಅಗತ್ಯ ವಿನಾಯತಿ ನೀಡುವಂತೆ ಸಂಬಂಧ ಪಟ್ಟ ತಹಶೀಲ್ದಾರ್‌ಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಎಸ್ಪಿವಿಷ್ಣುವರ್ಧನ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿಕುಮಾರಚಂದ್ರ, ಡಿಡಿಪಿಐ ಶೇಷಶಯನ ಕಾರಿಂಜ, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಶಿಕ್ಷಣ ಇಲಾಖೆಯ ಎಲ್ಲಾ ಬಿಇಓಗಳು, ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು , ಕೆಎಸ್ಸಾರ್ಟಿಸಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X