Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಪರೀಕ್ಷೆ : ವಿದ್ಯಾರ್ಥಿಗಳ...

ಎಸೆಸೆಲ್ಸಿ ಪರೀಕ್ಷೆ : ವಿದ್ಯಾರ್ಥಿಗಳ ಪೋಷಕರಿಗೆ ಆತಂಕ ಬೇಡ - ಉಡುಪಿ ಜಿಲ್ಲಾಧಿಕಾರಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ15 Jun 2020 9:36 PM IST
share

ಉಡುಪಿ, ಜೂ.15: ಇದೇ ಜೂನ್ 25ರಿಂದ ಆರಂಭಗೊಳ್ಳುವ ಎಸೆಸೆಲ್ಸಿ ಪರೀಕ್ಷೆ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್‌ಓಪಿ ಅನ್ವಯ ವಿದ್ಯಾರ್ಥಿ ಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಟೈಸ್ ಮಾಡಲಾಗಿದೆ. ಪ್ರತಿ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಟೈಸ್ ಮಾಡಲಾಗುವುದು. ಪ್ರತೀ ವಿದ್ಯಾರ್ಥಿಗೂ ಶಿಕ್ಷಣ ಇಲಾಖೆಯಿಂದ ಸ್ಯಾನಟೈಸ್ ಗಳನ್ನು ನೀಡಲಾಗಿದ್ದು, ಪ್ರತೀ ವಿದ್ಯಾರ್ಥಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಸುರಕ್ಷತಾ ಅಂತರದೊಂದಿಗೆ ಪ್ರವೇಶ ನೀಡಲು ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲು ಕ್ರಮ ಕೈಗೊಂಡಿದ್ದು, 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗಿದೆ. ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಒದಗಿಸಲು ರೂಟ್‌ಮ್ಯಾಪ್ ಸಿದ್ದಪಡಿಸಲಾಗುತ್ತಿದ್ದು, ಪ್ರತೀ ರೂಟ್‌ಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ.ಯಾವುದೇ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾ ಗುವುದರಿಂದ ವಂಚಿತನಾದಂತೆ ಹಾಗೂ ಆತನಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಎಸೆಸೆಲ್ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿದ್ದಲ್ಲಿ ಶಿಕ್ಷಣ ಇಲಾಖೆಯ ಸಹಾಯವಾಣಿಯನ್ನು ನೇರವಾಗಿ ಸಂಪರ್ಕಿಸಿ ಖಚಿತ ಮಾಹಿತಿ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಖಾಸಗಿ, ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಶಾಲೆಗಳ ಬಸ್ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಖಾಸಗಿ ಬಸ್ ಮಾಲಕರ ಸಂಘದಿಂದ ಅಗತ್ಯ ಸಹಕಾರ ಪಡೆಯಲಾಗಿದೆ ಎಂದರು.

ವಿದ್ಯಾರ್ಥಿಗಳು ಮನೆಯಿಂದಲೇ ಕುದಿಸಿ ಆರಿಸಿದ ಕುಡಿಯುವ ನೀರು ತರು ವಂತೆ ತಿಳಿಸಿದ ಜಿಲ್ಲಾಧಿಕಾರಿ, ಸುರಕ್ಷತಾ ಅಂತರ ಕಾಯ್ದುಕೊಂಡು ಪ್ರತಿಯೊಬ್ಬ ರನ್ನೂ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಿ ಪರೀಕ್ಷಾ ಕೇಂದ್ರದೊಳಗೆ ಬಿಡಬೇಕಾಗಿರುವುದರಿಂದ, ವಿದ್ಯಾರ್ಥಿಗಳು ಆದಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ತಿಳಿಸಿದರು.

ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಿಕೊಂಡು, ಪರೀಕ್ಷಾ ವಿಧಾನ ಗಳಿಗೆ ಯಾವುದೇ ಚ್ಯುತಿ ಬಾರದಂತೆ, ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಎಸೆಸೆಲ್ಸಿ ಪರೀಕ್ಷೆ ನಡೆಸಲು ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ಹಿಸುವಂತೆ ಜಿ.ಜಗದೀಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X