Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಪುನರ್ಜನ್ಮ : ದುಶ್ಚಟ ಮುಕ್ತರ...

ಆಳ್ವಾಸ್ ಪುನರ್ಜನ್ಮ : ದುಶ್ಚಟ ಮುಕ್ತರ ಅನುಸರಣ ಕಾರ‍್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Jun 2020 10:59 PM IST
share
ಆಳ್ವಾಸ್ ಪುನರ್ಜನ್ಮ : ದುಶ್ಚಟ ಮುಕ್ತರ ಅನುಸರಣ ಕಾರ‍್ಯಕ್ರಮ

ಮೂಡುಬಿದಿರೆ : ಮದ್ಯ ವ್ಯಸನ ಆರಂಭದಲ್ಲಿ ಸಣ್ಣ ಹವ್ಯಾಸವಾಗಿ ಪ್ರಾರಂಭವಾದದ್ದು ನಂತರ ಚಟವಾಗಿ ಮಾರ್ಪಡುತ್ತದೆ. ಇದರಿಂದಾಗಿ ಮನುಷ್ಯ ತನ್ನ ಸ್ವನಿಯಂತ್ರಣ  ಕಳೆದುಕೊಂಡು ಆರೋಗ್ಯ ಹಾಳುಮಾಡಿಕೊಳ್ಳುವುದಲ್ಲದೇ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುತ್ತಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೇಳಿದರು.

ಅವರು ಆಳ್ವಾಸ್ ಹೆಲ್ತ್ ಸೆಂಟರ್ ಸಹಯೋಗದಲ್ಲಿ ‘ಆಳ್ವಾಸ್ ಪುನರ್ಜನ್ಮ : ದುಶ್ಚಟ ಮುಕ್ತರ ಅನುಸರಣ ಕಾರ‍್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಪರಿಸರ, ಒತ್ತಡ, ಹದಗೆಟ್ಟ ಮಾನಸಿಕ ಆರೋಗ್ಯ, ಅನುವಂಶೀಯ ಪ್ರವೃತ್ತಿ, ವಯಸ್ಸು ಇವೆಲ್ಲವೂ ಮಧ್ಯಪಾನಕ್ಕೆ ಕಾರಣ ವಾಗಿರಬಹುದು. ಈ ವ್ಯಸನಕ್ಕೆ ಯೋಗ, ಧ್ಯಾನ, ಪ್ರಾಣಾಯಾಮಗಳ ಮೂಲಕ ಚಿಕಿತ್ಸೆ ನೀಡಿ, ಪುನರ್‌ಜನ್ಮದ ಅನುಭವವನ್ನು ಕಲ್ಪಿಸಿಕೊಡು ವುದು ನಮ್ಮ ಕರ‍್ಯಕ್ರಮದ ಉದ್ದೇಶ.  ಈ ಕಾರ್ಯವನ್ನು ಶ್ರೀ.ಕ್ಷೇ. ಧ, ಗ್ರಾ ಯೋಜನೆಯ ಸಹಕಾರ ಮಾರ್ಗದರ್ಶನದೊಂದಿಗೆ ನಮ್ಮ ತಂಡ ಉತ್ತಮವಾಗಿ ನಿರ್ವಹಿಸುತ್ತಿದೆ. ಈ ಮೂಲಕ ಮತ್ತಷ್ಟು ಮಧ್ಯವ್ಯಸನಿಗಳ ಬಾಳಿಗೆ ಆಸರೆಯಾಗಿ ಅವರನ್ನು ಸಾಮಾಜಿಕವಾಗಿ, ಕೌಟುಂಬಿಕ ವಾಗಿ, ಆರ್ಥಿಕವಾಗಿ ಸದೃಡಗೊಳಿಸುವುದು ಇದರ ಪ್ರಮುಖ ಉದ್ದೇಶ ಎಂದು ಹೇಳಿದರು.

ಮಧ್ಯಪಾನ ಸೇವನೆಯಿಂದ ಭಾರತ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಕಾನೂನು ಬಾಹಿರ ಚಟುವಟಿಕೆಗಳಿಗೂ ಮಧ್ಯಪಾನ ಒಂದು ರೀತಿಯ ಕಾರಣವಾಗಿದೆ.  ಕುಡಿತದ ಪ್ರಭಾವಕ್ಕೆ ಒಳಗಾಗಿ ತನ್ನ ಸ್ಥಿಮಿತವನ್ನು ಕಳೆದುಕೊಂಡು ಸಮಾಜ ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾ ಗುತ್ತಾರೆ. ಅಂತಹವರನ್ನು ಸರಿ ದಾರಿಗೆ ತರುವಲ್ಲಿ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಮೂಡುಬಿದಿರೆಯ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಹೇಳಿದರು.

ಕಾರ‍್ಯಕ್ರಮದಲ್ಲಿ ಕಳೆದ ಜನವರಿಯಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್ ಸಹಯೋಗದಲ್ಲಿ  ಎರಡು  ಹಂತದಲ್ಲಿ ನಡೆದ  ಮಧ್ಯ ವರ್ಜನ ಶಿಬಿರದಲ್ಲಿ ಪಾಲ್ಗೊಂಡ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನ್ಯಾಚುರಪತಿ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಪದವಿ ವಿಭಾಗದ ಪ್ರಾಂಶುಪಾಲ ಪ್ರೊ.ಕುರಿಯನ್, ಕೌನ್ಸಿಲರ್ ಸುಮನ್ ಪಿಂಟೋ, ಶ್ರೀ.ಕ್ಷೇ. ಧ, ಗ್ರಾ ಯೋಜನೆಯ ವಿವೇಕ್ ವಿನ್ಸಂಟ್ ಉಪಸ್ಥಿತರಿದ್ದರು. ಕರ‍್ಯಕ್ರಮವನ್ನು ಆಳ್ವಾಸ್ ಪುನರ್‌ಜನ್ಮದ ಮೇಲ್ವಿಚಾರಕರಾದ ರಾಮ್ ಪ್ರಸಾದ್ ರಾವ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X