Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಪ್ರಕರಣ ಹೆಚ್ಚಳ: 17 ಕಾರ್ಯ ತಂಡ...

ಕೊರೋನ ಪ್ರಕರಣ ಹೆಚ್ಚಳ: 17 ಕಾರ್ಯ ತಂಡ ರಚನೆ

ವಾರ್ತಾಭಾರತಿವಾರ್ತಾಭಾರತಿ15 Jun 2020 11:18 PM IST
share

ಬೆಂಗಳೂರು, ಜೂ.15: ನಗರದಲ್ಲಿ ಕೊರೋನ ಸೋಂಕಿತರ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸಲು ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.

ಅನ್ಲಾಕ್-1 ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಪುನರಾರಂಭಿಸಿರುವುದರಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಹಾಗೂ ಅಂತರ್ ರಾಜ್ಯ ವ್ಯಕ್ತಿಗಳ ಚಲನವಲನ ಹೆಚ್ಚುತ್ತಿರುವುದರಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ನಿಯಂತ್ರಿಸುವ ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳು ಹೆಚ್ಚಿಗೆ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆ ಕೆಲ ನಿರ್ದೇಶನಗಳನ್ನು ಹೊರಡಿಸಲಾಗಿದೆ.

ಒಂದೇ ಕಾರ್ಯಪಡೆ ರಚನೆ: ಬಿಬಿಎಂಪಿಯ ಎಲ್ಲ ವಾರ್ಡ್ ಗಳು ಮತ್ತು ಬೆಂಗಳೂರು (ನಗರ) ಮತ್ತು ಬೆಂಗಳೂರು(ಗ್ರಾಮೀಣ) ಜಿಲ್ಲೆಗಳ ಎಲ್ಲ ತಾಲೂಕುಗಳನ್ನು ಒಳಗೊಂಡ ಬೆಂಗಳೂರು ನಗರ ವಿಸ್ತೃತ ಪ್ರದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕ ಹರಡುವಿಕೆ ನಿಯಂತ್ರಿಸುವ ಉದ್ದೇಶಕ್ಕೆ ಒಂದೇ ಕಾರ್ಯಪಡೆ ರಚಿಸಲು ಆದೇಶಿಸಲಾಗಿದೆ. ಬಿಬಿಎಂಪಿ ಆಯುಕ್ತರು ಈ ಕಾರ್ಯಪಡೆಯ ಮುಖ್ಯಸ್ಥರಾಗಿರುತ್ತಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‍ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಅವರ ಅಧಿನದಲ್ಲಿರುವ ಎಲ್ಲ ಸಿಬ್ಬಂದಿ ಕೋವಿಡ್19 ಸಾಂಕ್ರಾಮಿಕ ಹರಡುವಿಕೆ ನಿಯಂತ್ರಿಸಲು ಹಾಗೂ ತಾಯಿ ಹಾಗೂ ಮಕ್ಕಳ ಆರೋಗ್ಯ(ಎಂಸಿಎಚ್) ಕಾರ್ಯಕ್ರಮದ ಅನುಷ್ಠಾನಕ್ಕೆ ಬಿಬಿಎಂಪಿ ಆಯುಕ್ತರ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ.

ಕಾರ್ಯ ತಂಡಗಳ ರಚನೆ: ಸಾಂಕ್ರಾಮಿಕ ರೋಗ ಹರಡುವಿಕೆ ನಿಯಂತ್ರಣ ಮತ್ತು ಎಂಸಿಎಚ್ ಕಾರ್ಯಕ್ರಮದ ಹೆಚ್ಚಿನ ಆದ್ಯತೆಯ ಕಾರ್ಯಗಳಿಗಾಗಿ 17 ಕಾರ್ಯತಂಡಗಳನ್ನು ರಚಿಸಲಾಗಿದೆ. ಇಡೀ ಬೆಂಗಳೂರು ವಿಸ್ತೃತ ಪ್ರದೇಶದಲ್ಲಿ ನಿಯೋಜಿಸಲಾದ ಕಾರ್ಯಗಳ ಸಮಗ್ರ ಪರಿಣಾಮಕಾರಿ ಮತ್ತು ಸಮಯೋಚಿತ ಅನುಷ್ಠಾನಕ್ಕೆ ಈ ಕಾರ್ಯತಂಡಗಳು ಜವಾಬ್ದಾರವಾಗಿರುತ್ತವೆ.

ಬಿಬಿಎಂಪಿ ಆಯುಕ್ತರ ಜವಾಬ್ದಾರಿ ಏನು?: ಕಾರ್ಯಪಡೆಯ ಮುಖ್ಯಸ್ಥರಾದ ಬಿಬಿಎಂಪಿ ಆಯುಕ್ತರು ಪ್ರತಿ ಕಾರ್ಯತಂಡದ ಕಾರ್ಯವನ್ನು ವಾರಕ್ಕೊಮ್ಮೆ ಪರಿಶೀಲಿಸಬೇಕು. ತಂಡವಾರು ಅಗತ್ಯವಾದ ಬೆಂಬಲವನ್ನು ಒದಗಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಸಂಬಂಧಿತ ತಂಡವು ಅದರ ನಿಯೋಜಿತ ಕಾರ್ಯ ಅನುಷ್ಠಾನವನ್ನು ಸುಧಾರಿಸಲು ಮಾರ್ಗದರ್ಶನ ನೀಡುವುದು. ಬಳಿಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿಗೆ ವಾರಕೊಮ್ಮೆ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X