Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ‘ಕೋವಿಡ್ ಕೇರ್ ಸೆಂಟರ್’...

ರಾಜ್ಯದಲ್ಲಿ ‘ಕೋವಿಡ್ ಕೇರ್ ಸೆಂಟರ್’ ಸ್ಥಾಪನೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ16 Jun 2020 9:00 PM IST
share
ರಾಜ್ಯದಲ್ಲಿ ‘ಕೋವಿಡ್ ಕೇರ್ ಸೆಂಟರ್’ ಸ್ಥಾಪನೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜೂ.16: ರಾಜ್ಯದಲ್ಲಿ ಕಳೆದ ಎರಡು ವಾರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ‘ಕೋವಿಡ್ ಕೇರ್ ಸೆಂಟರ್’ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇತರೆ ರಾಜ್ಯಗಳಲ್ಲಿ ಯಶಸ್ವಿಯಾಗಿ ಅನುಸರಿಸುತ್ತಿರುವ ಕ್ರಮಗಳ ಕುರಿತಂತೆ ಪರಿಣಿತರ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ ಕೆಲವು ತೀರ್ಮಾನ ತೆಗೆದುಕೊಂಡಿರುವುದಾಗಿ ಹೇಳಿದರು.

ಖಾಸಗಿ ವಲಯದ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ತೆಗೆದುಕೊಂಡು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕೊರೋನ ಚಿಕಿತ್ಸೆಯ ವ್ಯವಸ್ಥೆ ಇರುವಂತಹ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಯಾವ ಆಸ್ಪತ್ರೆಗಳು ಎಷ್ಟು ಹಾಸಿಗೆಗಳು, ಎಷ್ಟು ಐಸಿಯು ಮತ್ತು ವೆಂಟಿಲೇಟರ್ ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎನ್ನುವುದಕ್ಕೆ ಶೀಘ್ರದಲ್ಲೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಸುಧಾಕರ್ ತಿಳಿಸಿದರು.

ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಪ್ರಯತ್ನಿಸುತ್ತಿದೆ. ಪ್ರತಿದಿನ ಕನಿಷ್ಠ 15 ಸಾವಿರದಿಂದ 25 ಸಾವಿರ ಕೋವಿಡ್ ಟೆಸ್ಟ್ ನಡೆಸುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಹೆಚ್ಚಿನ ಜನಸಂದಣಿ ಇರುವ ಜಾಗಗಳಲ್ಲಿ ಇರುವ ಜನರು, ಪೌರಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಪೊಲೀಸರು, ಆರೋಗ್ಯ ಕಾರ್ಯಕರ್ತರು ಮುಂತಾದ ಹೆಚ್ಚು ಜನಸಂಪರ್ಕ ಹೊಂದುತ್ತಿರುವ ಜನರನ್ನು ಹೆಚ್ಚಿಗೆ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು.

ಎಲ್ಲ ರೀತಿಯ ಐಎಲ್‍ಐ ಹಾಗೂ ಎಸ್‍ಎಆರ್‍ಐ ಲಕ್ಷಣಗಳಿರುವವರನ್ನು ಕಡ್ಡಾಯ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ. ರೋಗ ಲಕ್ಷಣವಿರದ ಸೋಂಕಿತರನ್ನು ಪ್ರತ್ಯೇಕಿಸಿ ನಿಗಾವಹಿಸಲು ಅನುವಾಗುವಂತೆ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಯಾರಿಗೆ ರೋಗ ಲಕ್ಷಣ ಎಷ್ಟಿದೆ, ಎಂತಹ ಚಿಕಿತ್ಸೆ ಅಗತ್ಯವಿದೆ, ಯಾವ ಆಸ್ಪತ್ರೆಯಲ್ಲಿ ದಾಖಲಿಸಬೇಕು ಮುಂತಾದವುಗಳನ್ನು ಕಂಡುಹಿಡಿಯಲು ತಜ್ಞರ ಸಮಿತಿ ರಚಿಸಲಾಗುವುದು. ಸಿಸಿಸಿ ಕೇಂದ್ರಗಳಲ್ಲಿ ಬೆಂಗಳೂರು ನಗರದಲ್ಲಿ ಕನಿಷ್ಠ 20 ಸಾವಿರ ಹಾಸಿಗೆ ಇರುವಂತೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ರೋಗಲಕ್ಷಣ ಇಲ್ಲದಿರುವವರಿಗೆ ಆಸ್ಪತ್ರೆಗಳಲ್ಲಿ ಭರ್ತಿ ಮಾಡಿಕೊಂಡರೆ ರೋಗ ಲಕ್ಷಣವಿರುವವರಿಗೆ ಚಿಕಿತ್ಸೆಗೆ ತೊಂದರೆ ಆಗಬಹುದು. ಆದುದರಿಂದ, ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈ ಸಿದ್ಧತೆಗಳನ್ನು ಮಾಡುತ್ತಿರುವುದಾಗಿ ಅವರು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಜವಾಬ್ದಾರಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸೋಂಕು ಹೆಚ್ಚು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಅತ್ಯಂತ ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ. ಅಗತ್ಯಬಿದ್ದಲ್ಲಿ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಪರಿಸ್ಥಿತಿಯನ್ನು ಸುಧಾರಿಸಲು ತಮ್ಮ ಸರಕಾರ ಬದ್ಧವಾಗಿದೆ. ಶೀಘ್ರದಲ್ಲೆ ಇನ್ನಷ್ಟು ಲ್ಯಾಬ್‍ಗಳನ್ನು ಸ್ಥಾಪಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X