Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. : ಎರಡು ವರ್ಷದ ಮಗು ಸಹಿತ 79...

ದ.ಕ. : ಎರಡು ವರ್ಷದ ಮಗು ಸಹಿತ 79 ಮಂದಿಗೆ ಕೊರೋನ ಸೋಂಕು

ವಾರ್ತಾಭಾರತಿವಾರ್ತಾಭಾರತಿ16 Jun 2020 9:03 PM IST
share
ದ.ಕ. : ಎರಡು ವರ್ಷದ ಮಗು ಸಹಿತ 79 ಮಂದಿಗೆ ಕೊರೋನ ಸೋಂಕು

ಮಂಗಳೂರು, ಜೂ.16: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಕೊರೋನ ಸ್ಫೋಟ ಸಂಭವಿಸಿದ್ದು, ಬರೋಬ್ಬರಿ 79 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿವೆ.

ಮಂಗಳವಾರ ರಾಜ್ಯದಲ್ಲಿ ಪತ್ತೆಯಾದ ಕೋವಿಡ್-19 ಸೋಂಕಿತರ ಪೈಕಿ ದ.ಕ. ಜಿಲ್ಲೆ ಅಗ್ರ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 378ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10 ಮಂದಿ ಹೊರ ಜಿಲ್ಲೆಯವರು. ಈ ನಡುವೆ 11 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

79 ಸೋಂಕಿತರ ಪೈಕಿ 75 ಮಂದಿ ಸೌದಿ ಅರೇಬಿಯಾದಿಂದ ಬಂದು ಕ್ವಾರಂಟೈನ್‌ನಲ್ಲಿದ್ದರು. ಮೂವರು ಮಹಾರಾಷ್ಟ್ರದಿಂದ ಬಂದವರು. ಆದರೆ ಸೋಂಕಿತರ ಸಂಪರ್ಕವಿಲ್ಲದ ಪುತ್ತೂರಿನ ನಿವಾಸಿಯೊಬ್ಬರಿಗೂ ಸೋಂಕು ತಗುಲಿರುವುದು ಆತಂಕ ಸೃಷ್ಟಿಸಿದೆ. ಪ್ರಸ್ತುತ ಇವರೆಲ್ಲರನ್ನೂ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿತರಲ್ಲಿ ಬಹುತೇಕ ಮಂದಿ ಯುವಕರೇ ಆಗಿದ್ದಾರೆ. ಅದರಲ್ಲೂ ಅತಿಹೆಚ್ಚು 46 ಮಂದಿ 30 ವರ್ಷ ವಯಸ್ಸಿನೊಳಗಿನವರು. 57 ಮಂದಿ ಪುರುಷರಿಗೆ ಕೊರೋನ ಸೋಂಕು ತಗುಲಿದ್ದರೆ, ಕೇವಲ ಆರು ಮಹಿಳೆಯರಲ್ಲಷ್ಟೇ ಪಾಸಿಟಿವ್ ಬಂದಿರುವುದು ವಿಶೇಷ. ಎಲ್ಲರೂ 57 ವರ್ಷದೊಳಗಿನವರೇ ಆಗಿದ್ದಾರೆ. ಸೌದಿಯಿಂದ ಆಗಮಿಸಿದ ಎರಡು ವರ್ಷದ ಮಗುವಿಗೆ ಕೂಡ ಸೋಂಕು ಹರಡಿದೆ.

ಸೌದಿ ಅರೇಬಿಯಾದಿಂದ ಜೂ.5, 7, 8, 11, 12ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಡಿಗೆ ವಿಮಾನಗಳು ಬಂದಿದ್ದವು. ಪ್ರತಿಯೊಂದು ವಿಮಾನದಲ್ಲೂ ಸುಮಾರು 170ರಷ್ಟು ಪ್ರಯಾಣಿಕರಿದ್ದರು. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಮಂದಿಗೆ ಸೋಂಕು ಹರಡುವ ಸಾಧ್ಯತೆಗಳು ದಟ್ಟವಾಗಿವೆ.

ಉಳಿದಂತೆ ಸೋಂಕು ತಗುಲಿದ 24 ವರ್ಷದ ಮಹಿಳೆ ಜೂ.5ರಂದು ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿದ್ದು, ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. 20, 23 ವರ್ಷದ ಇಬ್ಬರು ಯುವಕರು ಜೂ.15ರಂದು ಮುಂಬೈನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದರು. ಆದರೆ ಪುತ್ತೂರಿನ 25 ವರ್ಷದ ವ್ಯಕ್ತಿಗೆ ಸೋಂಕು ಹೇಗೆ ತಗುಲಿದ್ದು ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

11 ಮಂದಿ ಗುಣಮುಖ: ಸಮಾಧಾನಕರ ಬೆಳವಣಿಗೆಯಲ್ಲಿ ಮಂಗಳವಾರ 11 ಮಂದಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ 169 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ. ಈಗ ಚಿಕಿತ್ಸೆಯಲ್ಲಿರುವ ಬಹುತೇಕ ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದರೆ 70 ವರ್ಷದ ವ್ಯಕ್ತಿಯೊಬ್ಬರು ಮಧುಮೇಹ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೋರ್ವ 52 ವರ್ಷ ವಯಸ್ಸಿನ ವ್ಯಕ್ತಿ ಮಧುಮೇಹ ಮತ್ತು ಅರ್ಬುದ ರೋಗದಿಂದ ಬಳಲುತ್ತಿದ್ದು ಐಸಿಯುನಲ್ಲಿದ್ದಾರೆ.

ಮಂಗಳವಾರ ಒಟ್ಟು 296 ವರದಿಗಳು ಪ್ರಯೋಗಾಲಯದಿಂದ ಬಂದಿದ್ದು, ಅವುಗಳಲ್ಲಿ 79 ಪಾಸಿಟಿವ್ ಆಗಿದ್ದರೆ, ಉಳಿದೆಲ್ಲವೂ ನೆಗೆಟಿವ್ ಆಗಿವೆ. ಹೊಸದಾಗಿ 84 ಮಂದಿಯ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಒಟ್ಟು 329 ಮಂದಿಯ ವರದಿ ಇನ್ನಷ್ಟೇ ಬರಲು ಬಾಕಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X