Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ...

ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಪಿಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2020 10:15 PM IST
share

ಮಂಗಳೂರು, ಜೂ.16: ಕೋವಿಡ್-19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಸಮಿತಿಯ ವತಿಯಿಂದ ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆಯ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಕೋವಿಡ್-19 ನಿಗ್ರಹಿಸುವಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಸಂಪೂರ್ಣ ವಿಫಲವಾಗಿದೆ. ಲಾಕ್‌ಡೌನ್ ಸಂದರ್ಭ ಜನರ ಜೀವ ರಕ್ಷಣೆ ಮಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ದೇಶ ವಿರೋಧಿಯಾಗಿ ವರ್ತಿಸಿದೆ. ಕಳೆದ 3 ತಿಂಗಳಿನಿಂದ ಜನತೆ ಕೆಲಸವಿಲ್ಲದೆ, ಕೈಯಲ್ಲಿ ಕಾಸಿಲ್ಲದೆ, ಆಹಾರಕ್ಕಾಗಿ ಪರದಾಡುವಂತಾಗಿದೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಸರಕಾರ ತನ್ನ ಕೀಳು ಮಟ್ಟದ ರಾಜಕೀಯದಲ್ಲೇ ಮಗ್ನವಾಗಿದೆ. ದೇಶವು ಗಂಭೀರ ಸ್ಥಿತಿಯಲ್ಲಿದ್ದಾಗ ನಾಪತ್ತೆಯಾಗಿದ್ದ ಗೃಹ ಸಚಿವರು ಈಗ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂಬ ಸುದ್ದಿ ತಿಳಿದು ಮತ್ತೆ ಪ್ರತ್ಯಕ್ಷರಾಗಿದ್ದಾರೆ. ಕೊರೋನ ವೈರಸ್ ವ್ಯಾಪಕವಾಗಿ ದೇಶದಲ್ಲಿ ಹರಡುತ್ತಿದ್ದರೂ ಜನತೆಯ ಜೀವವನ್ನು ರಕ್ಷಣೆ ಮಾಡುವ ಬದಲು ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕೋಟ್ಯಂತರ ಕುಟುಂಬಗಳಿಗೆ ಮಾಸಿಕ 7,500ರೂ.ನೀಡಬೇಕು ಮತ್ತು ಮುಂದಿನ 6 ತಿಂಗಳವರೆಗೆ ನೇರ ನಗದು ವರ್ಗಾವಣೆ ಮಾಡಬೇಕು, ಪ್ರತೀ ಕುಂಟುಂಬಕ್ಕೆ ಮಾಸಿಕ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು,ಉದ್ಯೋಗ ಖಾತ್ರಿ ಯೋಜನೆ ಯನ್ನು ವಿಸ್ತರಿಸಬೇಕು, ಕಾರ್ಮಿಕರಿಗೆ ವೇತನ ಹಾಗೂ ಕೆಲಸದ ಭದ್ರತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಹೊಂದಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ವಾಸುದೇವ ಉಚ್ಚಿಲ್, ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಜಯಂತಿ ಬಿ. ಶೆಟ್ಟಿ, ಭಾರತಿ ಬೋಳಾರ, ಸುರೇಶ್ ಬಜಾಲ್, ಬಾಬು ದೇವಾಡಿಗ, ನವೀನ್ ಕೊಂಚಾಡಿ, ಅಶೋಕ್ ಶ್ರಿಯಾನ್, ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ ಮುಂತಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X