ಬೆಂಗಳೂರು: ಗುತ್ತಿಗೆ ವೈದ್ಯರಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ
ಬೆಂಗಳೂರು, ಜೂ.16: ವೇತನ ತಾರತಮ್ಯ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ ಎಂದು 506 ಗುತ್ತಿಗೆ ನೌಕರರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಕೊರೋನ ಸಂದರ್ಭದಲ್ಲಿಯೂ ಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನಮ್ಮನ್ನು ಖಾಯಂ ಮಾಡಲು ಸರಕಾರ ಮುಂದಾಗುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಯಂ ವೈದ್ಯರಿಗೆ ಸರಕಾರ 80 ಸಾವಿರ ರೂ. ವೇತನ ನೀಡುತ್ತಿದೆ. ಆದರೆ, ಗುತ್ತಿಗೆ ವೈದ್ಯರಿಗೆ ಸರಕಾರ ಕೇವಲ 45 ಸಾವಿರ ರೂ. ನೀಡುತ್ತಿದೆ. ಗುತ್ತಿಗೆ ವೈದ್ಯರು 3 ರಿಂದ 7 ವರ್ಷದವರೆಗೂ ಸೇವೆ ಸಲ್ಲಿಸಿದ್ದಾರೆ. ಆದರೂ ಅವರನ್ನು ಕಡಗಣನೆ ಮಾಡಲಾಗಿದೆ ಎಂದು ದೂರಿದ್ದಾರೆ.
Next Story





