ಚೀನಾಕ್ಕೆ ತಕ್ಕ ಪಾಠ ಕಲಿಸಲು ಭಾರತ ಸಜ್ಜು: ಸುರೇಶ್ ಅಂಗಡಿ

ಬೆಳಗಾವಿ, ಜೂ.17: ಇಡೀ ಪ್ರಪಂಚವೇ ಕೊರೋನ ಸೋಂಕಿನ ಭೀತಿಯಲ್ಲಿ ಇರುವಾಗ ಚೀನಾದವರು ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದಾರೆ. ಇದಕ್ಕೆ ನಮ್ಮ ಸೈನಿಕರು ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.
ಬುಧವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಹರಲಾಲ್ ನೆಹರು ಅವರು ಪ್ರಧಾನಿ ಆಗಿದ್ದಾಗಲೂ ಚೀನಾದವರು ಕಾಲು ಕೆರೆದು ಜಗಳಕ್ಕೆ ನಿಂತಿದ್ದರು. ಆದರೆ, ಕೊರೋನ ಸಂದರ್ಭದಲ್ಲೂ ಜಗಳಕ್ಕೆ ನಿಂತಿದ್ದು, ನಮ್ಮ ಸೈನಿಕರು ತಕ್ಕ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.
ಭಾರತಕ್ಕಾಗಿ ಪ್ರಾಣತ್ಯಾಗ ಮಾಡಿದ ಸೈನಿಕರಿಗೆ ಚಿರಶಾಂತಿ ಸಿಗಲಿ, ಸೈನಿಕರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸಿದರು.
ಭಾರತವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ಮಾಡಿದ್ದು, ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ಎದುರಿಸುತ್ತೇವೆ ಎಂದು ತಿಳಿಸಿದರು.
Next Story





