Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಮಗಾರಿಯ ವಿವರ ಸಂಗ್ರಹಿಸಲು ಪ್ರತ್ಯೇಕ...

ಕಾಮಗಾರಿಯ ವಿವರ ಸಂಗ್ರಹಿಸಲು ಪ್ರತ್ಯೇಕ ತಂಡ ರಚನೆ - ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ17 Jun 2020 5:43 PM IST
share

ಮಂಗಳೂರು : ಸ್ಮಾರ್ಟ್ ಸಿಟಿ - ಕುಡ್ಸೆಂಪ್ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ‌ ಸಭಾಂಗಣದಲ್ಲಿ ನಡೆಯಿತು.

ಕುಡಿ ನೀರು ಸರಬರಾಜು ಹಾಗೂ ಯುಜಿಡಿ ಕಾಮಗಾರಿಗಳ ಕುರಿತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವ ದೂರುಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿ ಸಭೆ ನಡೆಸಲಾಗಿದ್ದು ಸಮಸ್ಯೆ ಬಗೆಹರಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಈಗಾಗಲೇ ಸ್ಮಾರ್ಟ್ ಸಿಟಿ ಹಾಗೂ ಕುಡ್ಸೆಂಪ್ ಯೋಜನೆಗಳ ಅನೇಕ ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ. ಈಗ ಪ್ರಗತಿ ಹಂತದಲ್ಲಿರುವ ಪ್ರತಿಯೊಂದು ಕಾಮಗಾರಿಗಳೂ ಕೂಡ ಯಾವ ಹಂತದಲ್ಲಿದೆ, ಹಾಗೂ ಕಾಮಗಾರಿಯ ವಿವರ ಸಂಗ್ರಹಿಸಲು ಮನಪಾ ಸದಸ್ಯರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಹಾಗೂ ಕುಡ್ಸೆಂಪ್ ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ತಂಡ ರಚಿಸಿ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ವಿವರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ತಾಂತ್ರಿಕ ತಂಡ ಮಂಗಳೂರು ನಗರದಲ್ಲಿ ನಗರ ಪಾಲಿಕೆ,ಕುಡ್ಸೆಂಪ್ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ   ಈಗಾಗಲೇ ಪೂರ್ಣ ಗೊಂಡಿರುವ ಅಥವ ಪ್ರಗತಿ ಹಂತದಲ್ಲಿರುವ ಎಲ್ಲಾ ಕಾಮಗಾರಿಗಳ ಪ್ರತ್ಯೇಕವಾಗಿ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಲಿದೆ. ಕಾಮಗಾರಿಯಲ್ಲಿ ದೋಷಗಳು ಕಂಡು ಬಂದರೆ ಅದನ್ನು ಸರಿಪಡಿಸಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎನ್ನುವುದನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳ‌ ಜೊತೆ ಚರ್ಚಿಸಲಾಗುವುದು ಎಂದರು.

ನಗರದಲ್ಲಿ ಪ್ರತಿಮನೆಗೂ ದಿನದ 24 ಗಂಟೆ ಕುಡಿಯುವ  ನೀರು ಒದಗಿಸುವ ಅಮೃತ್ ಯೋಜನೆ ಕಾಮಗಾರಿಯ ಕುರಿತು ಮಾಹಿತಿ ಪಡೆಯಲಾಗಿದೆ. ನಗರದಲ್ಲಿ ನೀರು ಸರಬರಾಜಿಗೆ ಗುರುತಿಸಿರುವ 48 ಝೋನ್ ಗಳ ಪೈಕಿ 18 ಝೋನ್ ಗಳಲ್ಲಿ ಸರ್ವೇ ಕಾರ್ಯ ಪೂರ್ಣ ಗೊಂಡಿದೆ. ಇನ್ನುಳಿದ ಝೋನ್ ಗಳ ಸರ್ವೆ ಕಾರ್ಯಗಳು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಪೈಪ್ ಲೈನ್ ಗಳ ಪುನರ್ ಪರಿಶೀಲನೆ,ಪಂಪಿಂಗ್ ವ್ಯವಸ್ಥೆಗಳ ಪರಿಶೀಲನೆ ನಡೆಸಿ‌ ಸಂಪೂರ್ಣ ವರದಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಸ್ಮಾರ್ಟ್ ಸಿಟಿ ಅಧಿಕಾರಿ ಮೊಹಮ್ಮದ್ ನಝೀರ್, ಕುಡ್ಸೆಂಪ್ ಪ್ರಾಜೆಕ್ಟ್ ಡೈರೆಕ್ಟರ್ ಮಂಜುನಾಥ್, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷ ಪ್ರೇಮಾನಂದ ಶೆಟ್ಟಿ, ಎಸ್.ಇ.ಝೆಡ್ ಅಧಿಕಾರಿಗಳು, ಪಾಲಿಕೆ ಸದಸ್ಯರು, ಸಾರ್ವಜನಿಕ ಹಿತ ರಕ್ಷಣಾ ಸಮಿತಿಯ ಹನುಮಂತ ಕಾಮತ್, ಧರ್ಮರಾಜ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮನಪಾ ಅಧಿಕಾರಿ ಗಳು, ಕುಡ್ಸೆಂಪ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X