ಮೃತ ಯೋಧರಿಗೆ ದ.ಕ. ಬಿಜೆಪಿಯಿಂದ ಶ್ರದ್ಧಾಂಜಲಿ

ಮಂಗಳೂರು, ಜೂ.17: ಭಾರತದ ಗಡಿಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಶ್ರದ್ಧಾಂಜಲಿ ಅರ್ಪಿಸುತ್ತದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡು ಬಿದಿರೆ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಆದರೆ ಈ ಘಟನೆಗೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ದೇಶದ ಪ್ರಧಾನ ಮಂತ್ರಿಯವರ ವಿರುದ್ಧ ಮಾಡಿರುವ ಟೀಕೆಗಳು ಸರಿಯಲ್ಲ.ಈ ಸಂದರ್ಭದಲ್ಲಿ ದೇಶದ ರಕ್ಷಣೆಗಾಗಿ ಸರಕಾರದ ಜೊತೆ ಎಲ್ಲಾ ಪಕ್ಷಗಳು ಕೈಜೋಡಿಸಬೇಕಾಗಿದೆ.ಆದರೆ ಕಾಂಗ್ರೆಸ್‌ನ ಮಾಜಿ ಸಚಿವರು ಈ ಸಂದರ್ಭದಲ್ಲೂ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಸುದರ್ಶನ್ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರ್, ಮನಪ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಇತರ ಪದಾಧಿಕಾರಿಗಳಾದ ಜಗದೀಶ್ ಶೇಣವ, ಪ್ರಭಾ ಮಾಲಿನಿ, ಜಿತೇಂದ್ರ ಕೊಟ್ಟಾರಿ, ರಣದೀಪ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.
Next Story







