ಹುತಾತ್ಮ ಯೋಧರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಶ್ರದ್ಧಾಜಲಿ

ಮಂಗಳೂರು, ಜೂ.17: ಲಡಾಕಿನಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಯೋಧರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಮಿಥುನ್ ರೈ ನೇತೃತ್ವದಲ್ಲಿ ಬುಧವಾರ ಸಂಜೆ 5 ಗಂಟೆಗೆ ನಗರದ ಕದ್ರಿ ಪಾರ್ಕ್ ಬಳಿಯ ಕಾರ್ಗಿಲ್ ಹುತಾತ್ಮರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಪ್ರವೀನ್ ಚಂದ್ರ ಆಳ್ವ, ಎಸಿ ವಿನಯರಾಜ್, ಅನಿಲ್ ಕುಮಾರ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ಬ್ಲಾಕ್ ಅದ್ಯಕ್ಷರಾದ ವಿಶ್ವಾಸ್ ದಾಸ್, ಜಿಲ್ಲಾ ಪದಾಧಿಕಾರಿಗಳಾದ ಕಿರಣ್ ಬುಡ್ಲೆಗುತ್ತು, ಪ್ರಸಾದ್ ಮಲ್ಲಿ, ನಾಸಿರ್ ಸಾಮಣಿಗೆ, ಲಾರೆನ್ಸ್ ಡಿಸೋಜ, ಅನ್ಸಾರುದ್ದೀನ್, ಸಮರ್ಥ್ ಭಟ್, ಸವಾದ್ ಸುಳ್ಯ ಉಪಸ್ಥಿತರಿದ್ದರು.
Next Story





