Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ದ್ವಿತೀಯ ಪಿಯುಸಿ, ಎಸೆಸೆಲ್ಸಿ...

ಶಿವಮೊಗ್ಗ: ದ್ವಿತೀಯ ಪಿಯುಸಿ, ಎಸೆಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಈಶ್ವರಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Jun 2020 11:45 PM IST
share
ಶಿವಮೊಗ್ಗ: ದ್ವಿತೀಯ ಪಿಯುಸಿ, ಎಸೆಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ

ಶಿವಮೊಗ್ಗ, ಜೂ.17: ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿ ಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನು ಈಗಾಗಲೇ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿಯನ್ನು ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ. ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಕೊಂಡು ಬರಲು ಸೂಚಿಸಲಾಗಿದೆ. ಆದರೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಒಂದು ಮಾಸ್ಕ್ ಒದಗಿಸಬೇಕು. ಇದೇ ರೀತಿ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೆಟ್ ನೀಡಲು ಸೂಚನೆ ನೀಡಲಾಗಿದೆ ಎಂದರು.

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‌ಗಳಿಗೆ 133 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ನಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್ ಅಧಿಕಾರಿಯನ್ನು ಜವಾಬ್ದಾರಿ ಮಾಡಲಾಗುವುದು ಎಂದು ಹೇಳಿದರು.

ಇದೇ ರೀತಿ ಎಸೆಸೆಲ್ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಲೋಪ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿದ್ದು, ಗ್ರಾಮೀಣ ಭಾಗದಲ್ಲಿ 40 ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್ ವ್ಯವಸ್ಥೆ ಮಾಡಲಾಗಿದೆ. 189 ರೂಟ್‌ಗಳಲ್ಲಿ ಒಟ್ಟು 336 ಪಾಯಿಂಟ್ ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲು ರೂಟ್ ಬಸ್‌ಗಳನ್ನು ಹೊರತುಪಡಿಸಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಸ್ವಲ್ಪ ದೂರದಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಬೇಕೆಂದರು.

ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3ಮಾಸ್ಕ್ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾಲಕರು ಕೂಡ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಡಿಡಿಪಿಯು ನಾಗರಾಜ ಕಾಗಲಕರ್, ಡಿಡಿಪಿಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X