ಉಡುಪಿ ಜಿಲ್ಲಾಧಿಕಾರಿಯಿಂದ ಪಿಯುಸಿ ಪರೀಕ್ಷಾ ಕೇಂದ್ರದ ಪರಿಶೀಲನೆ

ಉಡುಪಿ, ಜೂ.18: ಉಡುಪಿ ಜಿಲ್ಲೆಯಾದ್ಯಂತ ಒಟ್ಟು 27 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಆರಂಭವಾಗಿದ್ದು, ಜಿಲ್ಲಾಧಿಕಾರಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಉಡುಪಿ ನಗರದ ಬೋರ್ಡ್ ಹೈಸ್ಕೂಲಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಶಿಕ್ಷಣ ಇಲಾಖೆಯ ಅಧಿಕಾರಿ ಗಳೊಂದಿಗೆ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಕೊಠಡಿಗೆ ತೆರಳಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕಾರ್ಯ ಮಾಡಿದರು. ಇದಕ್ಕೂ ಮುನ್ನ ಪ್ರತಿ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳನ್ನು ಸ್ಕ್ರೀನಿಂಗ್ ಮಾಡಲಾಯಿತು. ಸ್ಯಾನಿಟೈಸರ್ ಬಳಸಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡಲಾಯಿತು. ಎಲ್ಲ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸ ಲಾಗಿದೆ.
Next Story





.jpeg)

