ಕೊರೋನ ನಿಯಂತ್ರಣಕ್ಕೆ ಮಾಸ್ಕ್ ಧಾರಣೆ ಕಡ್ಡಾಯ: ಡಿಸಿ ಸಿಂಧೂ ರೂಪೇಶ್

ಮಂಗಳೂರು, ಜೂ.18: ಕೊರೋನ ನಿಯಂತ್ರಿಸುವ ಸಲುವಾಗಿ ಮನೆಯಿಂದ ಹೊರಬರುವ ಸಮಯದಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.
ಗುರುವಾರ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ಜಾಗೃತಿ ಕಾರ್ಯ್ರಮ ಮಂಗಳೂರಿನಲ್ಲಿ ನಡೆಯಿತು.
ಕೊರೊನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸರಕಾರದ ಕಾರ್ಯಗಳ ಜತೆಗೆ ನಾಗರಿಕರ ಪಾತ್ರವೂ ಅಮೂಲ್ಯ.ಮನೆಯಿಂದ ಹೊರಗೆ ಬರುವಾಗ ಎಲ್ಲಾ ನಾಗರಿಕರು ಮಾಸ್ಕ್ ಧರಿಸುವುದರಿಂದ ತಮ್ಮಿಂದಾಗುವಷ್ಟು ಕೊರೋನ ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸಿಂತಾಗುತ್ತದೆ ಎಂದರು ಹೇಳಿದರು.
ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರ್, ಅಪರ ಜಿಲ್ಲಾಧಿಕಾರಿ ಎಂ.ಜಿ.ರೂಪಾ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ಜಾಗೃತಿ ಮೆರವಣಿಗೆ ಸ್ಟೇಟ್‌ಬ್ಯಾಂಕ್‌ನ ಹ್ಯಾಮಿಲ್ಟನ್ ಸರ್ಕಲ್ ಮೂಲಕವಾಗಿ ತಿರುಗಿ ಮತ್ತೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸಮಾಪ್ತಿಯಾಯಿತು.





