ಮನಪಾ ಆವರಣದಲ್ಲೂ ಮಾಸ್ಕ್ ಜನಜಾಗೃತಿ

ಮಂಗಳೂರು ಪಾಲಿಕೆ ವತಿಯಿಂದ ಮಾಸ್ಕ್ ದಿನ ಜನಜಾಗೃತಿ ಕಾರ್ಯಕ್ರಮ ಗುರುವಾರ ಪಾಲಿಕೆ ಆವರಣದಲ್ಲಿ ನಡೆಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಮಾತನಾಡಿ, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂಬ ಅರಿವು ಎಲ್ಲರಲ್ಲಿಯೂ ಮೂಡಬೇಕು ಎಂದರು.
ಉಪಮೇಯರ್ ಜಾನಕಿ ಯಾನೆ ವೇದಾವತಿ, ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಜಗದೀಶ್ ಶೆಟ್ಟಿ, ಪೂರ್ಣಿಮಾ, ವರುಣ್ ಚೌಟ, ಆಯುಕ್ತರಾದ ಶಾನಾಡಿ ಅಜಿತ್ ಕುಮಾರ್ ೆಗ್ಡೆ, ಅಧಿಕಾರಿಗಳು ಉಪಸ್ಥಿತರಿದ್ದರು.
Next Story





