ಚಡಗ ಕಾದಂಬರಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.18:ಕೋಟೇಶ್ವರದ ಎನ್.ಆರ್.ಎ.ಎಂ.ಎಚ್. ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗರ ನೆನಪಿನಲ್ಲಿ ನೀಡಲಾಗುವ 11ನೇ ವರ್ಷದ ಚಡಗ ಕಾದಂಬರಿ ಪ್ರಶಸ್ತಿಗೆ 2019ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಕಾದಂಬರಿಗಳನ್ನು ಲೇಖಕ- ಪ್ರಕಾಶಕರಿಂದ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಕೃತಿಯ ಮೂರು ಪ್ರತಿಗಳನ್ನು ಸ್ಪರ್ಧೆಯ ಸಂಚಾಲಕರಾದ ಪ್ರೊ.ಉಪೇಂದ್ರ ಸೋಮಯಾಜಿ ‘ಶ್ರೀ’, ಚಿತ್ರಪಾಡಿ, ಅಂಚೆ:ಸಾಲಿಗ್ರಾಮ, ಉಡುಪಿ-575225 (ಮೊ:9740842722) ಇವರಿಗೆ ಆಗಸ್ಟ್ 15ರೊಳಗೆ ತಲುಪುವಂೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.
ರಾಜ್ಯೋತ್ಸವದ ಸಂದರ್ಭದಲ್ಲಿ ಆಯೋಜಿಸಲಾಗುವ ಸಾರ್ವಜನಿಕ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಪ್ರಶಸ್ತಿಯು ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ 10,000ರೂ. ನಗದು ಬಹುಮಾನವನ್ನು ಒಳ ಗೊಂಡಿರುತ್ತದೆ.
ಈ ಹಿಂದಿನ ವರ್ಷಗಳಲ್ಲಿ ಕನ್ನಡದ ಪ್ರಮುಖ ಸಾಹಿತಿಗಳಾದ ನಾ.ಮೊಗಸಾಲೆ, ಬೊಳುವಾರು, ಕೆ.ಸತ್ಯನಾರಾಯಣ, ವಸುಮತಿ ಉಡುಪ, ರೇಖಾ ಕಾಖಂಡಕಿ, ಗೋಪಾಲಕೃಷ್ಣ ಪೈ, ಗುರುಪ್ರಸಾದ್ ಕಾಗಿನೆಲೆ ಮುಂತಾದವರ ಕಾದಂಬರಿಗಳು ಪ್ರಶಸ್ತಿಗೆ ಭಾಜನವಾಗಿವೆ ಎಂದು ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ಭಾಸ್ಕರ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







