7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜೂ.18: ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ-ಡಾ.ಎನ್.ನಾಗಲಾಂಬಿಕಾ ದೇವಿ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ-ತುಷಾರ್ ಗಿರಿನಾಥ್, ಸರ್ವೆ, ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಇಲಾಖೆಯ ಆಯುಕ್ತ-ಹರ್ಷಾ ಗುಪ್ತಾರನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಹರ್ಷಾ ಗುಪ್ತಾರನ್ನು ಐಎಂಎ ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್.ಜಯರಾಂ ಅವರನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರನ್ನಾಗಿ, ಎಚ್.ಬಸವರಾಜೇಂದ್ರ ಅವರನ್ನು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಡಾ.ಎನ್.ಶಿವಶಂಕರ ಅವರನ್ನು ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯಕಾರಿ ಸದಸ್ಯರನ್ನಾಗಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಎಸ್.ಆರ್.ನಟೇಶ ಅವರನ್ನು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆನೆ ಯೋಜನೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.





