Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಿ ಸರಕುಗಳನ್ನು ಬಹಿಷ್ಕರಿಸಲು...

ಚೀನಿ ಸರಕುಗಳನ್ನು ಬಹಿಷ್ಕರಿಸಲು ವ್ಯಾಪಾರಿಗಳ ಒಕ್ಕೂಟದ ಕರೆ

ವಾರ್ತಾಭಾರತಿವಾರ್ತಾಭಾರತಿ18 Jun 2020 7:59 PM IST
share
ಚೀನಿ ಸರಕುಗಳನ್ನು ಬಹಿಷ್ಕರಿಸಲು ವ್ಯಾಪಾರಿಗಳ ಒಕ್ಕೂಟದ ಕರೆ

ಹೊಸದಿಲ್ಲಿ,ಜೂ.18: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಹಿಂಸಾತ್ಮಕ ಘರ್ಷಣೆಗಳ ಹಿನ್ನೆಲೆಯಲ್ಲಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ)ವು ಚೀನಿ ಸರಕುಗಳ ಬಹಿಷ್ಕಾರಕ್ಕೆ ಕರೆ ನೀಡಿದೆ.

ತನ್ನ ‘ಭಾರತೀಯ ಸಾಮಾನ್-ಹಮಾರಾ ಅಭಿಮಾನ್’ ಅಭಿಯಾನದಡಿ ಚೀನಿ ಉತ್ಪನ್ನಗಳನ್ನು ಅನುಮೋದಿಸುವುದನ್ನು ನಿಲ್ಲಿಸುವಂತೆ ಅದು ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಎಂ.ಎಸ್.ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಸೇರಿದಂತೆ ಸೆಲೆಬ್ರಿಟಿಗಳನ್ನು ಕೋರಿ ಬಹಿರಂಗ ಪತ್ರವನ್ನು ಬರೆದಿದೆ.

ಏಳು ಕೋಟಿ ವ್ಯಾಪಾರಿಗಳು ಮತ್ತು 40,000 ವ್ಯಾಪಾರಿಗಳ ಸಂಘಗಳನ್ನು ಪ್ರತಿನಿಧಿಸುತ್ತಿರುವ ಸಿಎಐಟಿ ಬಹಿಷ್ಕರಿಸಬಹುದಾದ ಚೀನಿ ಉತ್ಪನ್ನಗಳ ಪಟ್ಟಿಯೊಂದನ್ನು ಬಿಡುಗಡೆಗೊಳಿಸಿದೆ. ತನ್ನ ಅಭಿಯಾನದ ಅಂಗವಾಗಿ ಅದು ಚೀನಿ ಸರಕುಗಳನ್ನು ಮಾರಾಟ ಮಾಡದಂತೆ ವ್ಯಾಪಾರಿಗಳನ್ನು ಪ್ರೇರೇಪಿಸುವುದು ಮಾತ್ರವಲ್ಲ,ದೇಶಿಯ ಉತ್ಪನ್ನಗಳನ್ನೇ ಖರೀದಿಸುವಂತೆ ಬಳಕೆದಾರರನ್ನೂ ಆಗ್ರಹಿಸಲಿದೆ.

ಸರಕಾರವೂ ಚೀನಿ ಉತ್ಪನ್ನಗಳ ವಿರುದ್ಧ ನಿಲುವು ತಳೆದಿರುವಂತಿದೆ. ಸುರಕ್ಷತೆಯ ದೃಷ್ಟಿಯಿಂದ ತನ್ನ 4ಜಿ ಜಾಲದ ಉನ್ನತೀಕರಣಕ್ಕೆ ಚೀನಿ ಉಪಕರಣಗಳನ್ನು ಬಳಸದಂತೆ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ದೂರ ಸಂಪರ್ಕ ಇಲಾಖೆಯು ಸೂಚಿಸಲಿದೆ ಎಂದು ಸರಕಾರಿ ಮೂಲಗಳು ಬುಧವಾರ ತಿಳಿಸಿದ್ದವು. ಈ ನಿಟ್ಟಿನಲ್ಲಿ ಟೆಂಡರ್ ಅನ್ನು ಮರುರೂಪಿಸಲೂ ಇಲಾಖೆಯು ನಿರ್ಧರಿಸಿದೆ. ಚೀನಿ ಉಪಕರಣಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವಂತೆ ಖಾಸಗಿ ಟೆಲಿಕಾಂ ಕಂಪನಿಗಳಿಗೂ ಸೂಚಿಸಲು ಸರಕಾರವು ಯೋಚಿಸುತ್ತಿದೆ ಎಂದು ಈ ಮೂಲಗಳು ಹೇಳಿದ್ದವು.

ಚೀನಾದ ವಿರುದ್ಧ ಪ್ರತಿಭಟನೆಗಳ ನಡುವೆಯೇ ಆ ದೇಶದ ಮೊಬೈಲ್ ಫೋನ್ ತಯಾರಿಕೆ ಕಂಪನಿ ಒಪ್ಪೊ ಭಾರತದಲ್ಲಿ ತನ್ನ ಮುಂಚೂಣಿಯ 5ಜಿ ಸ್ಮಾರ್ಟ್‌ಫೋನ್‌ನ ಬಿಡುಗಡೆಯನ್ನು ರದ್ದುಗೊಳಿಸಿದೆ.

ಆದರೆ ದೇಶದ ಅತ್ಯಂತ ದೊಡ್ಡ ಸಗಟು ಮಾರುಕಟ್ಟೆಯಾಗಿರುವ ದಿಲ್ಲಿಯ ಸದರ್ ಬಝಾರ್‌ನ ವ್ಯಾಪಾರಿಗಳು ಬಹಿಷ್ಕೃತ ಉತ್ಪನ್ನಗಳ ಬದಲು ಯಾವುದನ್ನು ಮಾರಾಟ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ಅಭಿಯಾನದ ಹೊರತಾಗಿಯೂ ಹೆಚ್ಚಿನ ಅಬಕಾರಿ ಸುಂಕಗಳು ಮತ್ತು ವಿಳಂಬ ನೀತಿ ಸ್ಥಳೀಯ ತಯಾರಿಕೆ ಕ್ಷೇತ್ರದ ಬೆಳವಣಿಗೆಯನ್ನು ಮೊಟಕುಗೊಳಿಸಿರುವುದನ್ನು ಅವರು ಬೆಟ್ಟು ಮಾಡಿದ್ದಾರೆ.

‘ಚೀನಿ ಉತ್ಪನ್ನಗಳಿಗೆ ವಿದಾಯ ಹೇಳಲು ನಾವೂ ಬಯಸಿದ್ದೇವೆ. ಹೋಳಿ ಸಂದರ್ಭದಲ್ಲಿ ಹಲವಾರು ಚೀನಿ ಉತ್ಪನ್ನಗಳನ್ನು ನಾವು ಬಹಿಷ್ಕರಿಸಿದ್ದೆವು. ಆದರೆ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾಡುವುದು ಕಷ್ಟ. ಸರಕಾರವು ಅಬಕಾರಿ ಸುಂಕಗಳನ್ನು ತಗ್ಗಿಸುವ,ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸುವ ಮತ್ತು ವಿಳಂಬ ನೀತಿಯನ್ನು ನಿವಾರಿಸುವ ಅಗತ್ಯವಿದೆ ’ಎಂದು ಮಾರುಕಟ್ಟೆಯ ವ್ಯಾಪಾರಿಗಳ ಸಂಘವು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X