ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನ ಮುಕ್ತವಾಗಿಸಿ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಜೂ.18: ಸುರಕ್ಷಿತ ಅಂತರ, ಸಾನಿಟೈಸರ್ ಬಳಸುವ ಮೂಲಕ ದೇಶವನ್ನು ಕೊರೋನ ವೈರಸ್ ಸೋಂಕು ಮುಕ್ತವಾಗಿಸಲು ಎಲ್ಲರೂ ಒಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿದರು.
ಗುರುವಾರ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಾಸ್ಕ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊರೋನ ತಡೆಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಜನರೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನದ ವಿರುದ್ಧ ಹೋರಾಟ ನಡೆಸಬೇಕೆಂದು ಅವರು ಹೇಳಿದರು.
ಲಾಕ್‍ಡೌನ್ ಸಡಿಲಿಕೆ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗಿದೆ. ಆರೋಗ್ಯ ಸೌಲಭ್ಯಗಳ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ವಿಧಾನ ಪರಿಷತ್ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದೆ. ಅದನ್ನು ಪಾಲಿಸುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಮ್ಮೆಲ್ಲರ ಕರ್ತವ್ಯ ಎಂದರು.
Next Story





