ಆಷಾಡ ಮಾಸದ ಹೆಸರಲ್ಲಿ ಪ್ರಸಾದ ವಿತರಣೆಗೆ ಅವಕಾಶವಿಲ್ಲ: ಮೈಸೂರು ಜಿಲ್ಲಾದಿಕಾರಿ ಅಭಿರಾಜ್ ಆದೇಶ

ಮೈಸೂರು,ಜೂ.19: ಆಷಾಢ ಮಾಸದ ಹೆಸರಲ್ಲಿ ಮೈಸೂರು ಜಿಲ್ಲೆಯಾಧ್ಯಂತ ಪ್ರಸಾದ ವಿತರಣೆಗೆ ಅವಕಾಶ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ಬಾಗಿಲನ್ನು ಮುಚ್ಚಬೇಕು ಎಂಬ ಅಭಿಪ್ರಾಯ ಇದೆ. ಮಂಗಳವಾರವೂ ಪರಿಸ್ಥಿತಿ ನೋಡಿ ನಿರ್ಬಂಧದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ನಗರದಲ್ಲಿರುವ ದೇವಾಲಯಗಳಲ್ಲೆ ಹೆಚ್ಚು ಜನ ಸೇರಿದರೆ ಅವುಗಳಿಗೂ ನಿರ್ಬಂಧ ವಿಧಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿ ಅಭಿರಾಂ ಜೀ ಶಂಕರ್, ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಪಂಚಾಯತ್ ಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನ ನೇಮಕ ಮಾಡಬೇಕು. ಇದಕ್ಕಾಗಿ ಅಧಿಕಾರಿಗಳ ಪಟ್ಟಿ ತಯಾರಿಸುತ್ತಿದ್ದೇವೆ. ಹಲವು ಅಧಿಕಾರಿಗಳನ್ನ ಕೋವಿಡ್ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮುಂದೆ ಕೂಡ ಪ್ರವಾಹ ಬರುವ ಸಾಧ್ಯತೆ ಇದೆ. ಆ ಕೆಲಸಕ್ಕೆ ನೀರಾವರಿ ಇಲಾಖೆ ಅಧಿಕಾರಗಳನ್ನ ನಿಯೋಜನೆ ಮಾಡಬೇಕಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಒಟ್ಟು 254 ಗ್ರಾಮ ಪಂಚಾಯತ್ ಗಳಿವೆ. ಅದರಲ್ಲಿ ಎಷ್ಟು ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂಬ ಮಾಹಿತಿ ಕಲೆಹಾಕುತ್ತಿದ್ದೇವೆ. ಶೀಘ್ರದಲ್ಲೇ ಆಡಳಿತಾಧಿಕಾರಿಗಳನ್ನ ನೇಮಕ ಮಾಡಲಾಗುವುದು ಎಂದು ಅಭಿರಾಂ ಜಿ ಶಂಕರ್ ತಿಳಿಸಿದರು







