Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ...

ಮಡಿಕೇರಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Jun 2020 3:33 PM IST
share
ಮಡಿಕೇರಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಮಡಿಕೇರಿ, ಜೂ.20 : ಕರ್ನಾಟಕ ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಮತ್ತು ತಿದ್ದುಪಡಿಯನ್ನು ಕೈಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ (ನಂಜುಂಡಸ್ವಾಮಿ) ಹಾಗೂ ಹಸಿರು ಸೇನೆ ಸದಸ್ಯರು ಶನಿವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಚಿಮ್ಮಂಗಡ ಗಣೇಶ್ ಅವರ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ತಡೆ ನಡೆಸಲು ಮುಂದಾದಾಗ ಮಧ್ಯಪ್ರವೇಶಿಸಿದ ಡಿವೈಎಸ್‍ಪಿ ದಿನೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರುಗಳು ಕೊರೋನ ಸಂಕಷ್ಟದ ಸಂದರ್ಭದಲ್ಲಿ ರಸ್ತೆ ತಡೆ ಮಾಡಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡದಂತೆ ಮನವಿ ಮಾಡಿದರು. ಮಾನವ ಸರಪಳಿ ಮಾಡುವಂತೆ ಸಲಹೆ ನೀಡಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಚಿಮ್ಮಂಗಡ ಗಣೇಶ್ ಅವರು, ಕೊಡಗು ದಕ್ಷಿಣ ಭಾರತಕ್ಕೆ ಜಲ ಮೂಲದ  ಕೇಂದ್ರವಾಗಿದೆ. ಇಲ್ಲಿನ ಜೀವವೈವಿಧ್ಯತೆ, ಆಹಾರ ಉತ್ಪಾದನೆಗೆ ರಾಜ್ಯ ಸರಕಾರ ಜಾರಿಗೆ ತರಲುದ್ದೇಶಿಸಿರುವ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

1961ರ ಭೂಸುಧಾರಣೆ ಕಾಯ್ದೆಯ 79 ಎಬಿಸಿ ಮತ್ತು 80ನೇ ಕಲಂ ನಿಯಮದಡಿ ಕೃಷಿ ಭೂಮಿಯನ್ನು ರೈತರಲ್ಲದವರಿಗೆ ಮಾರಾಟ ಮಾಡಲು ಅವಕಾಶವಿರಲ್ಲಿಲ್ಲ. ಅದರೆ, ಮಸೂದೆ ತಿದ್ದುಪಡಿಯಿಂದ ಹಣವಂತರು ಯಾರು ಬೇಕಾದರೂ ಕೃಷಿ ಜಮೀನು ಖರೀದಿಸಲು ಅವಕಾಶವಾಗಲಿದ್ದು, ಇದು ಭೂ ಕಬಳಿಕೆದಾರರಿಗೂ ವರದಾನವಾಗಲಿದೆ. ರೈತರು ಕೂಡ ಹಣದಾಸೆಗಾಗಿ ತಮ್ಮ ಜಮೀನನ್ನು ಕೈಗಾರಿಕೋದ್ಯಮಿಗಳು ಸೇರಿದಂತೆ ಶ್ರೀಮಂತರಿಗೆ ಮಾರಾಟ ಮಾಡುವುದರಿಂದ ಕೃಷಿ ಕ್ಷೇತ್ರ ವಿನಾಶದತ್ತ ಸಾಗುವ ಅಪಾಯವಿದೆ. ಸಣ್ಣ ರೈತಾಪಿಗಳ ಒಕ್ಕಲುತನವನ್ನು ರಕ್ಷಿಸುವ ಹಾಗೂ ಸಣ್ಣಪುಟ್ಟ ಹಿಡುವಳಿದಾರರ ಅಸಹಾಯಕತೆಯನ್ನು ಧನವಂತರು, ಕೈಗಾರಿಕೋದ್ಯಮಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ನುಡಿದರು.

ಕೊಡಗಿನ ಜೀವವೈವಿಧ್ಯತೆ ಹಾಗೂ ಜಲಮೂಲಗಳನ್ನು ಸಂರಕ್ಷಿಸುವ ದಿಸೆಯಲ್ಲಿ ರಾಜ್ಯ ಸರಕಾರ ಕೊಡಗು ಜಿಲ್ಲೆಯನ್ನೂ ಈ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಬೇಕು ಎಂದ ಅವರು, ರಾಜ್ಯದ ಕೃಷಿ ಕ್ಷೇತ್ರದ ಹಿತದೃಷ್ಟಿಯಿಂದ ಈ ಕಾಯ್ದೆಯನ್ನೇ ಕೈಬಿಡುವುದು ಒಳಿತು ಎಂದು ಅಭಿಪ್ರಾಯಪಟ್ಟರು.

ಕಾರ್ಯದರ್ಶಿ ಕಳ್ಳಿಚಂಡ ಧನು, ಖಜಾಂಚಿ ಚಂಗುಲಂಡ ರಾಜಪ್ಪ, ಸಂಚಾಲಕ ಬಾದುಮಂಡ ಮಹೇಶ್, ಸ್ಥಾಪಕ ಸದಸ್ಯ ಮಚ್ಚಮಾಡ ರಂಜು ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳಕ್ಕೆ ಬಂದ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X