ಎಸೆಸೆಲ್ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಶಿಕ್ಷಣ ಸಚಿವರ ನಿವಾಸದ ಎದುರು ಧರಣಿ

ಬೆಂಗಳೂರು, ಜೂ.20: ಕೊರೋನ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಶನಿವಾರ ಬಸವೇಶ್ವರನಗರದಲ್ಲಿರುವ ಸಚಿವ ಸುರೇಶ್ ಕುಮಾರ್ ನಿವಾಸದ ಮನೆ ಮುಂದೆ ಧರಣಿ ನಡೆಸಿದರು
ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಎಸೆಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು. ಸಚಿವರು ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಆಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆದಿತ್ತು. ಅದರಲ್ಲಿ ಓರ್ವ ವಿದ್ಯಾರ್ಥಿನಿಗೆ ಪರೀಕ್ಷೆ ಬರೆದ ನಂತರ ಕೊರೋನ ಸೋಂಕು ಇರೋದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕೊರೋನ ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಪರೀಕ್ಷೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.
Next Story





