Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರೀಕ್ಷಾ ಕೇಂದ್ರದ ಕೊಠಡಿಗೆ ಸ್ಯಾನಿಟೈಸ್...

ಪರೀಕ್ಷಾ ಕೇಂದ್ರದ ಕೊಠಡಿಗೆ ಸ್ಯಾನಿಟೈಸ್ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ

ಎಸೆಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆ

ವಾರ್ತಾಭಾರತಿವಾರ್ತಾಭಾರತಿ20 Jun 2020 6:24 PM IST
share
ಪರೀಕ್ಷಾ ಕೇಂದ್ರದ ಕೊಠಡಿಗೆ ಸ್ಯಾನಿಟೈಸ್ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಜೂ.20: ಎಸೆಸೆಲ್ಸಿ ಪರೀಕ್ಷೆಗೆ ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲ ರೀತಿಯ ಸಿದ್ಧತೆ ಜೊತೆಗೆ ಕೋವಿಡ್-19 ಸೋಂಕಿನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಟಿಯಿಂದ ಪ್ರತಿ ಕೇಂದ್ರದ ಪ್ರತಿಯೊಂದು ಕೊಠಡಿಗಳನ್ನು ಪ್ರತಿನಿತ್ಯವೂ ಸ್ಯಾನಿಟೈಸ್ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ನಿರ್ದೇಶನ ನೀಡಿದ್ದಾರೆ.

ನಗರದ ಕಪಿತಾನಿಯೊ ಪ್ರೌಢ ಶಾಲೆಯಲ್ಲಿ ನಡೆದ ಎಸೆಸೆಲ್ಸಿ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಪೂರ್ವ ಸಿದ್ಧತೆ ಕ್ರಮಗಳ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪರೀಕ್ಷೆ ಕೇಂದ್ರದಲ್ಲಿ ಆರೋಗ್ಯ ಕೌಂಟರ್ ಸ್ಥಾಪಿಸಿ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನ್ ಮೂಲಕ ಪರೀಕ್ಷಿಸಬೇಕು. ನಂತರವೇ ಕೊಠಡಿಗೆ ತೆರಳಲು ಅವಕಾಶ ಮಾಡಿ ಕೋಡಬೇಕು ಎಂದು ಹೇಳಿದರು.

ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಯ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಈಗಾಗಲೇ ಕೈಗೊಂಡಿದ್ದೇವೆ. ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ಸಮಯದಲ್ಲಿ ವಿದ್ಯಾರ್ಥಿಗಳು ಊಟ ಮತ್ತು ನೀರನ್ನು ಕಡ್ಡಾಯ ತೆಗೆದುಕೊಂಡು ಬರುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಸುರಕ್ಷಿತ ಅಂತರ ಪಾಲಿಸುವ ಜೊತೆಗೆ ಕೋವಿಡ್- 19 ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.

ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಕೊಠಡಿಗಳ ವ್ಯವಸ್ಥೆ, ಕೊರೋನ ಸೋಂಕಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಾಸ್ಕ್ ಧರಿಸದೇ ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲೆಯ ಗಡಿಭಾಗದ ಮಕ್ಕಳು ಸಮಯಕ್ಕೆ ಸರಿಯಾಗಿ ಬರುವಂತೆ ಆಯಾ ಶಾಲೆಯ ಶಿಕ್ಷಕರು ಜವಾಬ್ದಾರಿ ವಹಿಸಬೇಕು. ಎಲ್ಲ ಕೊಠಡಿಗಳಿಗೂ ಜನರೇಟರ್, ಸಿ.ಸಿ. ಕ್ಯಾಮರಾ ಅವಳವಡಿಕೆ ಮಾಡುವ ಜೊತೆಗೆ ಶಾಲೆಯಲ್ಲಿ ಶೌಚಾಲಯ ಸ್ವಚ್ಛವಾಗಿರಬೇಕು ಎಂದು ತಿಳಿಸಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಈ ಬಾರಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸುವ ನಿರೀಕ್ಷೆ ಇದೆ. ಪರೀಕ್ಷಾ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಡಿಡಿಪಿಐ ಮಲ್ಲೇಶ್ ಸ್ವಾಮಿ, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

‘ಸೋಂಕು ಲಕ್ಷಣವಿದ್ದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ’
ಪರೀಕ್ಷೆ ಬರೆಯಲು ಆಗಮಿಸಿದ ಯಾವುದೇ ವಿದ್ಯಾರ್ಥಿಗೆ ಕೆಮ್ಮು, ಶೀತ, ನೆಗಡಿ, ಜ್ವರ ಸೇರಿದಂತೆ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಸಂಬಂಧಿಸಿದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಇಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಇದರ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರದ್ದು ಎಂದು ಡಿಸಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X