ಔಷಧಿ ಮಳಿಗೆಗೆ ಬೆಂಕಿ: ಅಪಾರ ಪ್ರಮಾಣದ ಔಷಧಿಗಳು ಭಸ್ಮ

ಮೈಸೂರು,ಜೂ.20: ನಗರದ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪ್ರತಿಷ್ಠಿತ ಔಷಧಿ ಮಳಿಗೆ ಕಟ್ಟಡದಲ್ಲಿ ಶನಿವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.
ಅವಘಡ ಸಂಭವಿಸಿದ ಕೂಡಲೇ ಸ್ಥಳೀಯರು ಸರಸ್ವತಿಪುರಂನಲ್ಲಿರುವ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಅವಘಡದಿಂದ ಮೆಡಿಕಲ್ಸ್ ಕಟ್ಟಡ ಸಂಪೂರ್ಣ ಭಸ್ಮವಾಗಿದ್ದು, ಅಪಾರ ಪ್ರಮಾಣದ ಬೆಲೆ ಬಾಳುವ ಔಷಧಿಗಳು, ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





