Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಲಸ ಮಾಡಲು ಅಮಾವಾಸ್ಯೆ, ಗ್ರಹಣ ಎಂದಿಗೂ...

ಕೆಲಸ ಮಾಡಲು ಅಮಾವಾಸ್ಯೆ, ಗ್ರಹಣ ಎಂದಿಗೂ ಅಡ್ಡಿಯಾಗಲ್ಲ: ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ21 Jun 2020 6:18 PM IST
share
ಕೆಲಸ ಮಾಡಲು ಅಮಾವಾಸ್ಯೆ, ಗ್ರಹಣ ಎಂದಿಗೂ ಅಡ್ಡಿಯಾಗಲ್ಲ: ಎಂ.ಬಿ.ಪಾಟೀಲ್

ವಿಜಯಪುರ, ಜೂ.21: ಕಂಕಣ ಸೂರ್ಯಗ್ರಹಣವಿದ್ದರೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಇಡೀ ದಿನ ವಿವಿಧ ಇಲಾಖೆಗಳ ಹಾಗೂ ತಮ್ಮ ಬಿ.ಎಲ್.ಡಿ.ಇ ಸಂಸ್ಥೆಗೆ ಸಂಬಂಧಿಸಿದ ಸಭೆಗಳನ್ನು ನಡೆಸಿದ್ದಾರೆ.

ಶನಿವಾರ ಬೆಳಗ್ಗೆಯೇ ರವಿವಾರದ ಸಭೆಗಳನ್ನು ನಿಗದಿಪಡಿದ್ದ ಅವರು, ಗ್ರಹಣ ಇರುವುದರಿಂದ ಸಭೆ ನಡೆಸುವುದು ಸೂಕ್ತವಲ್ಲ ಎಂಬ ಸಿಬ್ಬಂದಿ ಮಾತಿಗೆ ಉತ್ತರಿಸುತ್ತಾ, ಕೆಲಸ ಮಾಡಲು ಅಮವಾಸ್ಯೆ, ಗ್ರಹಣ ಎಂದಿಗೂ ಅಡ್ಡಿಯಾಗುವುದಿಲ್ಲ. ಬಸವ ತತ್ವವನ್ನು ಕೇವಲ ಬಾಯಿಯಿಂದ ಹೇಳಿದರೆ ಸಾಲದು, ಆಚರಣೆಗೂ ತರಬೇಕು ಎಂದು ಇಂದು ಇಡೀ ದಿನ ಸಭೆಗಳನ್ನು ನಿಗದಿಪಡಿಸಿಕೊಂಡಿದ್ದರು.

ಅದರಂತೆ ಬೆಳಗ್ಗೆ ಬೃಹತ್ ನೀರಾವರಿ ಇಲಾಖೆಯ ತಮ್ಮ ಬಬಲೇಶ್ವರ ಕ್ಷೇತಕ್ಕೆ ಸಂಬಂಧಿಸಿದ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆ, ಮುಳವಾಡ ಏತ ನೀರಾವರಿ ಯೋಜನೆಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಜಾಕ್‍ವೆಲ್‍ಗಳಲ್ಲಿ ಮೋಟಾರ್ ದುರಸ್ಥಿ, ಶಾಖಾ ಕಾಲುವೆಗಳ ಕಾಮಗಾರಿಯ ಪ್ರಗತಿಯ ವಿವರಗಳು, ಭೂಸ್ವಾಧೀನಕ್ಕೆ ಸಂಬಂಧಿಸಿದ ಅನುದಾನ ಬಿಡುಗಡೆ ಕುರಿತು ಸವಿವರವಾಗಿ ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಮಂತ್ರಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿ, ಈ ಎರಡು ಯೋಜನೆಗಳಿಗೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಮಾತನಾಡಿದರು.

ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಯಾಗಲು, ವಿವಿಧ ನಾಲೆಗಳಿಗೆ ಅಗತ್ಯವಿರುವೆಡೆ ಚೆಕ್‍ಡ್ಯಾಂ ನಿರ್ಮಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಅವರು ಮಾಹಿತಿ ಸಂಗ್ರಹಿಸಿದ್ದಾರೆ.

ನಂತರ ಮಧ್ಯಾಹ್ನ ಬಿ.ಎಲ್.ಡಿ.ಇ ಸಂಸ್ಥೆ ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡರು. ಸರಕಾರದಿಂದ ಸಂಸ್ಥೆಗೆ ನೀಡಿದ 17 ಎಕರೆ ಲೀಸ್ ಆಸ್ತಿಯಲ್ಲಿ, ಅನೇಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು, ಮನೆಗಳನ್ನು ಕಟ್ಟಿಕೊಂಡಿದ್ದು, ಒತ್ತುವರಿದಾರರನ್ನು ತೆರವುಗೊಳಿಸಲು ಅಗತ್ಯ ಕಾನೂನು ಕ್ರಮ ಜರುಗಿಸುವ ಕುರಿತ ಸಭೆ ಇದಾಗಿತ್ತು.

ನಂತರ ಬಿ.ಎಲ್.ಡಿ.ಇ ಸ್ವಾಯತ್ತ ವಿವಿ ಕಚೇರಿಗೆ ತೆರಳಿ ಉಪಕುಲಪತಿ ಹಾಗೂ ವಿವಿ ಪ್ರಮುಖರೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಮೂಲಕ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡ ಬಂದಿರುವ ಪದ್ಧತಿಗಳನ್ನು ಮುರಿದು, ಕ್ರಿಯಾಶೀಲ ಕಾರ್ಯದಿಂದ ಎಂ.ಬಿ.ಪಾಟೀಲ್ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X