ಬೇರೆ ರಾಜ್ಯಗಳಿಗೆ ಮಾದರಿಯಾಗುವ ಕೆಲಸ ರಾಜ್ಯ ಸರಕಾರ ಮಾಡಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.21: ಬೇರೆ ರಾಜ್ಯಗಳಿಗೆ ಮಾದರಿಯಾಗುವಂತಹ ಯಾವ ಕೆಲಸವೂ ಕೋವಿಡ್ ವಿಚಾರದಲ್ಲಿ ರಾಜ್ಯ ಸರಕಾರ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಿದ ರೀತಿ, ರಾಮನಗರ ವಿಚಾರದಲ್ಲಿ ಅವರ ನಿಲುವು, ಬೇರೆ ರಾಜ್ಯಗಳಿಂದ ಬಂದವರನ್ನು ನೇರವಾಗಿ ಮನೆಗೆ ಕಳುಹಿಸಿದರು. ಇಲ್ಲಿನ ವಾಸ್ತವ ಏನು ಎಂದು ನಮಗೆ ಗೊತ್ತು. ಕೇಂದ್ರದ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷವೆ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ, ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ನಾನು ಅವರ ಜೊತೆ ಪೈಪೋಟಿಗೆ ಇಳಿಯುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Next Story





