ಬೆಂಗಳೂರು: ಕೊರೋನ ಸೋಂಕಿಗೆ ಸಂಚಾರಿ ಪೊಲೀಸ್ ಠಾಣೆ ಎಎಸ್ಐ ಬಲಿ

ಬೆಂಗಳೂರು, ಜೂ.21: ನಗರದ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ಕೊರೋನ ಸೋಂಕಿನಿಂದ ರವಿವಾರ ಮೃತಪಟ್ಟಿದ್ದಾರೆ.
ನಗರದ ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 59 ವರ್ಷದ ಎಎಸ್ಐ ಗೆ ಜೂ.18ರಂದು ಕೊರೋನ ಸೋಂಕು ದೃಢಪಟ್ಟಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ.
ಎಎಸ್‍ಐ ಜೊತೆ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ನಗರ ಸಂಚಾರಿ ವಿಭಾಗದಲ್ಲಿ ಕೆಲಸ ಮಾಡುವ 18 ಮಂದಿ ಪೊಲೀಸರಿಗೆ ಕೊರೋನ ತಗುಲಿದೆ. ನಗರ ಸಂಚಾರಿ ಪೊಲೀಸ್ ವಿಭಾಗದಲ್ಲಿ ಈವರೆಗೂ ಇಬ್ಬರು ಎಎಸೈ ಗಳು ಸಾವನ್ನಪ್ಪಿದ್ದಾರೆ. ಒಬ್ಬರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಉಳಿದ 15 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರಿ) ರವಿಕಾಂತೇಗೌಡ ತಿಳಿಸಿದ್ದಾರೆ.
Next Story





