ಮಿನಪೊಲಿಸ್‌ನಲ್ಲಿ ಗುಂಡು ಹಾರಾಟ: 1 ಸಾವು, 11 ಮಂದಿಗೆ ಗಾಯ

ವಾಶಿಂಗ್ಟನ್, ಜೂ. 21: ಅಮೆರಿಕದ ಮಿನಪೊಲಿಸ್ ನಗರದಲ್ಲಿ ನಡೆದ ಗುಂಡು ಹಾರಾಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಹಾಗೂ 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಹಲವಾರು ಅಂಗಡಿಗಳಿಗೆ ಹಾನಿಯುಂಟಾಗಿದೆ.
‘‘12 ಮಂದಿಗೆ ಗುಂಡಿನ ಗಾಯಗಳಾಗಿವೆ’’ ಎಂದು ಮಿನಪೊಲಿಸ್ ಪೊಲೀಸರು ಟ್ವಿಟರ್‌ನಲ್ಲಿ ಬರೆದಿದ್ದಾರೆ. ‘‘ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಹಾಗೂ ಇತರರಿಗೆ ಆಗಿರುವ ಗಾಯಗಳು ಗಂಭೀರವಲ್ಲ’’ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಕರಿಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಪೊಲೀಸರ ಕಸ್ಟಡಿಯಲ್ಲಿ ಸಾವಿಗೀಡಾಗಿರುವುದು ಜಗತ್ತಿನಾದ್ಯಂತ ಸುದ್ದಿಯಾಗಿತ್ತು. ಕರಿಯರ ವಿರುದ್ಧ ಪೊಲೀಸರು ನಡೆಸುತ್ತಿರುವರೆನ್ನಲಾದ ಅಮಾನುಷ ದಮನ ಕಾರ್ಯಾಚರಣೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಹಾಸುಹೊಕ್ಕಾಗಿರುವ ಜನಾಂಗೀಯ ತಾರತಮ್ಯದ ವಿರುದ್ಧ ಜನರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದ್ದರು.
Next Story





