ಕೊಡಗಿನಲ್ಲಿ ಮತ್ತೆ ಇಬ್ಬರಿಗೆ ಕೊರೋನ ಸೋಂಕು

ಮಡಿಕೇರಿ ಜೂ.22: ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಮಡಿಕೇರಿ ತಾಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಸೋಂಕು ಇರುವುದು ಖಚಿತವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 53 ಮಂದಿ ದಾಖಲಾಗಿದ್ದು, 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ಇರುವುದಾಗಿ ತಿಳಿದು ಬಂದಿದೆ.
ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಐದಕ್ಕೆ ಏರಿದೆ. ಈ ಪೈಕಿ ಆರಂಭದಲ್ಲಿ ಸೋಂಕು ಪತ್ತೆಯಾಗಿದ್ದ ವ್ಯಕ್ತಿ ಗುಣಮುಖರಾಗಿದ್ದಾರೆ. ಉಳಿದ ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಹೊರರಾಜ್ಯಗಳಿಂದ ಆಗಮಿಸಿರುವ 458 ಸೇರಿ ಒಟ್ಟು 465 ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
Next Story





