Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ...

ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ ಸುತ್ತಮುತ್ತಲು ಸೀಲ್ ಡೌನ್: ಕ್ವಾರಂಟೈನ್ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್

ಬೆಂಗಳೂರಿನಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಅಧಿಕಾರಿಗಳ ಸಭೆಯಲ್ಲಿ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Jun 2020 3:03 PM IST
share
ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ ಸುತ್ತಮುತ್ತಲು ಸೀಲ್ ಡೌನ್: ಕ್ವಾರಂಟೈನ್ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್

ಬೆಂಗಳೂರು, ಜೂ. 22: ಮಾರಕ ಕೊರೋನ ಸೋಂಕು ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ, ವಿವಿ ಪುರಂ, ಸಿದ್ಧಾಪುರ ವಾರ್ಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳನ್ನು ಸೀಲ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ ಅವರು, ಬೆಂಗಳೂರು ನಗರದಲ್ಲಿ ಹಾಗೂ ಇತರೆ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್‍ಡೌನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಗಿದೆ ಎಂದರು.

ನಗರದ ಕೃಷ್ಣ ರಾಜೇಂದ್ರ ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿ ಪುರಂ, ಕಲಾಸಿಪಾಳ್ಯಗಳಲ್ಲಿ ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್‍ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಿದರೆ ಮಾತ್ರ ಕೊರೋನ ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ ಎಂದ ಅವರು, ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಕ್ರಿಮಿನಲ್ ಕೇಸ್: ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದು, ಅಗತ್ಯ ಬಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಅಲ್ಲದೆ, ಪ್ರತಿ ವಾರ್ಡ್‍ನಲ್ಲಿಯೂ ಫೀವರ್ ಕ್ಲಿನಿಕ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ವಿವರ ನೀಡಿದರು.

ಸಾಂಸ್ಥಿಕ ಕ್ವಾರಂಟೈನ್‍ಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಮತ್ತಿತರ ಸರಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಲಾಗಿದೆ. ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದರು.

ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್-19 ನಿಯಂತ್ರಿಸುವುದು ನಮ್ಮ ಕರ್ತವ್ಯ. ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

ವಾರ್ ರೂಂನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ಯಾವುದೇ ವಿಳಂಬವಿಲ್ಲದೆ ಸೂಕ್ತ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ನಿರ್ದೇಶನ ನೀಡಿದರು.

ಸಭೆಯಲ್ಲಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಬೆಂಗಳೂರು ನಗರದಲ್ಲಿ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲು ಆದೇಶಿಸಲಾಗಿದೆ. ಲಾಕ್‍ಡೌನ್, ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಲ್ಲದೆ, ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಸಂಬಂಧ ಶೀಘ್ರದಲ್ಲೆ ಆದೇಶ ಹೊರಡಿಸಲಾಗುವುದು'

-ಆರ್.ಅಶೋಕ್, ಕಂದಾಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X