Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೋಷಕರಲ್ಲಿ ಧೈರ್ಯ ಬರುವವರೆಗೂ ಸರಕಾರ...

ಪೋಷಕರಲ್ಲಿ ಧೈರ್ಯ ಬರುವವರೆಗೂ ಸರಕಾರ ಶಾಲೆ ಆರಂಭಿಸುವುದಿಲ್ಲ: ಸಚಿವ ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ22 Jun 2020 8:37 PM IST
share
ಪೋಷಕರಲ್ಲಿ ಧೈರ್ಯ ಬರುವವರೆಗೂ ಸರಕಾರ ಶಾಲೆ ಆರಂಭಿಸುವುದಿಲ್ಲ: ಸಚಿವ ಹೆಬ್ಬಾರ್

ಬೆಳಗಾವಿ, ಜೂ.22: ರಾಜ್ಯದಲ್ಲಿ ಇನ್ನು ಮುಂದೆ ಲಾಕ್‍ಡೌನ್ ಪರಿಸ್ಥಿತಿ ಮುಂದುವರಿಯುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸೋಮವಾರ ನಗರಕ್ಕೆ ಬಂದಿದ್ದ ಅವರು ಬಿಜೆಪಿ ಕಚೇರಿಯಲ್ಲಿ ತಮ್ಮನ್ನು ಸ್ವಾಗತಿಸಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಮಿಕರು ಧೈರ್ಯವಾಗಿ ಹೋಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ರಾಷ್ಟ್ರದ ಪ್ರಗತಿಗಾಗಿ ಗಟ್ಟಿಯಾದ ಹೆಜ್ಜೆಗಳನ್ನು ಇಡಬೇಕಾದ ಸಂದರ್ಭದಲ್ಲಿ ನಾವೆಲ್ಲರೂ ಇದ್ದೇವೆ ಎಂದರು.

ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲೂ ಲಾಕ್‍ಡೌನ್ ನಿರ್ಬಂಧಗಳನ್ನು ಮುಂದೆ ಕಡಿಮೆ ಮಾಡಲಾಗುತ್ತದೆ. ಮಕ್ಕಳ ವಿಷಯದಲ್ಲಿ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಪ್ರಧಾನಿ ಹಾಗೂ ಮುಖ್ಯಮಂತ್ರಿ ಇಡುತ್ತಿದ್ದಾರೆ. ಒಂದು ವರ್ಷ ಮಕ್ಕಳ ಭವಿಷ್ಯವನ್ನು ಕಳೆದುಕೊಳ್ಳುತ್ತೇವೆ. ಆದರೆ, ಒಂದು ಮಗವನ್ನೂ ಕೋವಿಡ್-19ನಿಂದ ಕಳೆದುಕೊಳ್ಳುವುದಕ್ಕೆ ಸಿದ್ಧವಿಲ್ಲ. ಮಕ್ಕಳು ಹಾಗೂ ಪೋಷಕರ ಮೇಲೆ ಏನನ್ನೂ ಹೇರಿಕೆ ಮಾಡುವುದಿಲ್ಲ ಎಂದು ಹೇಳಿದರು.

ಎಲ್ಲಿಯವರೆಗೆ ಪೋಷಕರಲ್ಲಿ ಧೈರ್ಯ ಬರುವುದಿಲ್ಲವೋ ಅಲ್ಲಿವರೆಗೆ ಶಾಲೆಯನ್ನು ಆರಂಭ ಮಾಡುವಂತಹ ಹುಚ್ಚು ನಿರ್ಣಯ ಮಾಡುವುದಕ್ಕೆ ಸರಕಾರ ತಯಾರಿಲ್ಲ. ಸಚಿವ ಸಂಪುಟದಲ್ಲಿ ಈ ಬಗ್ಗೆ ಹಲವು ಬಾರಿ ಚರ್ಚಿಸಿದ್ದೇವೆ. ಆದರೆ, ಪಾಲಕರಿಗೆ ಧೈರ್ಯ ಬಂದಿಲ್ಲ. ಕೆಎಸ್ಸಾರ್ಟಿಸಿ ಬಸ್ ಓಡಿಸುತ್ತಿದ್ದೇವೆ, ಆದರೆ ಜನರೇ ಬರುತ್ತಿಲ್ಲ. ಹೀಗಾಗಿ ಜನರಿಗೆ ಧೈರ್ಯ ಬರುವವರೆಗೂ ಶಾಲೆಗಳನ್ನು ಆರಂಭಿಸುವುದು ಸರಿಯಲ್ಲ ಎಂದು ನಿರ್ಣಯ ಮಾಡಿದ್ದೇವೆ ಎಂದು ನುಡಿದರು.

ಎಸೆಸೆಲ್ಸಿ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮಕ್ಕಳ ಸುರಕ್ಷತೆಗಾಗಿ ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸಹಕಾರ ಕೊಡಬೇಕು. ಜನಪ್ರತಿನಿಧಿಗಳು ಕೂಡ ನೆರವಾಗಬೇಕು ಎಂದು ತಿಳಿಸಿದರು.

ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಮಾತನಾಡಿ, ಕಾರ್ಮಿಕ ಇಲಾಖೆಯ ಕಚೇರಿಯು ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿದೆ. ಇದರಿಂದ ಉತ್ತರದ ಕಾರ್ಮಿಕರಿಗೆ ಹೋಗಿ ಬರಲು ತೊಂದರೆ ಆಗುತ್ತಿದೆ. ಹೀಗಾಗಿ ನಗರದಲ್ಲಿ ಕಚೇರಿ ಆರಂಭಿಸಿದರೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X