Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ವಾನ್ ಎಫೆಕ್ಟ್: 5,000 ಕೋ.ರೂ.ಗಳ...

ಗಲ್ವಾನ್ ಎಫೆಕ್ಟ್: 5,000 ಕೋ.ರೂ.ಗಳ ಮೂರು ಚೀನಿ ಯೋಜನೆಗಳನ್ನು ತಡೆಹಿಡಿದ ಮಹಾರಾಷ್ಟ್ರ

ವಾರ್ತಾಭಾರತಿವಾರ್ತಾಭಾರತಿ22 Jun 2020 8:53 PM IST
share
ಗಲ್ವಾನ್ ಎಫೆಕ್ಟ್: 5,000 ಕೋ.ರೂ.ಗಳ ಮೂರು ಚೀನಿ ಯೋಜನೆಗಳನ್ನು ತಡೆಹಿಡಿದ ಮಹಾರಾಷ್ಟ್ರ

ಮುಂಬೈ,ಜೂ.22: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗೆ ಹಿಂಸಾತ್ಮಕ ಘರ್ಷಣೆಗಳಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬಳಿಕ ಗಡಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರವು ಚೀನಾದ ಕಂಪನಿಗಳೊಂದಿಗೆ ತಾನು ಒಪ್ಪಂದ ಮಾಡಿಕೊಂಡಿದ್ದ ಮೂರು ಯೋಜನೆಗಳನ್ನು ತಡೆಹಿಡಿದಿದೆ.

5,000 ಕೋ.ರೂ.ಗೂ ಹೆಚ್ಚಿನ ಉದ್ದೇಶಿತ ಹೂಡಿಕೆಗಳ ಈ ಯೋಜನೆಗಳನ್ನು ಗಡಿ ಘರ್ಷಣೆಗೆ ಕೆಲವೇ ಗಂಟೆಗಳ ಮುನ್ನ ‘ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0 ’ಹೂಡಿಕೆದಾರರ ಸಮ್ಮೇಳನದಲ್ಲಿ ಅಂತಿಮಗೊಳಿಸಲಾಗಿತ್ತು.

ಕೇಂದ್ರದೊಂದಿಗೆ ಸಮಾಲೋಚನೆಯ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಯೋಜನೆಗಳನ್ನು ತಡೆಹಿಡಿಯಲಾಗಿದ್ದು,ಕೇಂದ್ರದ ಮುಂದಿನ ನಿರ್ದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಮಹಾರಾಷ್ಟ್ರದ ಕೈಗಾರಿಕಾ ಸಚಿವ ಸುಭಾಷ ದೇಸಾಯಿ ಅವರು ಸೋಮವಾರ ಸುದ್ದಿಸಂಸ್ಥೆಗೆ ತಿಳಿಸಿದರು.

ಮಹಾರಾಷ್ಟ್ರ ಆರ್ಥಿಕ ಪುನಃಶ್ಚೇತನದ ಪ್ರಯತ್ನವಾಗಿ ಕಳೆದ ಸೋಮವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆದಿದ್ದ ಸಮ್ಮೇಳನದಲ್ಲಿ ಚೀನದ ರಾಯಭಾರಿ ಸನ್ ವೀಡಾಂಗ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಚೀನಾ,ದಕ್ಷಿಣ ಕೊರಿಯಾ,ಸಿಂಗಾಪುರ ಮತ್ತು ಅಮೇರಿಕದಂತಹ ರಾಷ್ಟ್ರಗಳೊಡನೆ ಒಂದು ಡಝನ್ ಒಪ್ಪಂದಗಳಿಗೆ ಅಂಕಿತ ಹಾಕಲಾಗಿತ್ತು. ಅದೇ ದಿನ ರಾತ್ರಿ ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆಗಳು ನಡೆದಿದ್ದವು.

ಮಹಾರಾಷ್ಟ್ರವು ಅಂಕಿತ ಹಾಕಿರುವ ಒಪ್ಪಂದಗಳಲ್ಲಿ ಚೀನಾದ ಹೆಂಗ್ಲಿ ಇಂಜಿನಿಯರಿಂಗ್ ಜೊತೆ 250 ಕೋ.ರೂ.,ಗ್ರೇಟ್ ವಾಲ್ ಮೋಟರ್ಸ್ ಜೊತೆ 3,770 ಕೋ.ರೂ. ಮತ್ತು ಪಿಎಂಐ ಎಲೆಕ್ಟ್ರೋ ಮೊಬಿಲಿಟಿ ಜೊತೆಗೆ 1,000 ಕೋ.ರೂ.ಗಳ ಯೋಜನೆಗಳು ಸೇರಿವೆ.

ಲಡಾಖ್ ಘರ್ಷಣೆಗಳ ಬಳಿಕ ಹಲವಾರು ರಾಜ್ಯಗಳು ಚೀನಿ ಕಂಪನಿಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪುನರ್‌ಪರಿಶೀಲಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X