Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ವೈರಸ್: ಖಾಸಗಿ ಆಸ್ಪತ್ರೆಗಳ...

ಕೊರೋನ ವೈರಸ್: ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ದರ ನಿಗದಿಪಡಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ23 Jun 2020 5:16 PM IST
share
ಕೊರೋನ ವೈರಸ್: ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ದರ ನಿಗದಿಪಡಿಸಿದ ರಾಜ್ಯ ಸರಕಾರ

ಬೆಂಗಳೂರು, ಜೂ.23: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಸಂರ್ದದಲ್ಲಿ ಎಲ್ಲೆಡೆ ಬೆಡ್‍ಗಳ ಕೊರತೆ ಎದುರಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲು ಸರಕಾರ ಚಿಂತನೆ ನಡೆಸಿದೆ. ಅದರ ನಡುವೆಯೇ ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ಸರಕಾರ ನಿಗದಿಪಡಿಸಿರುವ ಮಾರ್ಗಸೂಚಿಯ ಅನ್ವಯ ಖಾಸಗಿ ಆಸ್ಪತ್ರೆಗಳು ಶುಲ್ಕವನ್ನು ಪಡೆಯಬೇಕು. ಒಂದು ವೇಳೆ ದರಕ್ಕಿಂತ ಅಧಿಕ ಶುಲ್ಕವನ್ನು ಪಡೆದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ರಾಜ್ಯ ಸರಕಾರಕ್ಕೆ ಕೆಲವು ದಿನಗಳ ಹಿಂದೆಯಷ್ಟೇ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ಸಂಬಂಧ ಪ್ರಾಸ್ತಾವಿತ ಶುಲ್ಕ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದ್ದವು. ಕರ್ನಾಟಕ ಆರೋಗ್ಯ ಕಾಳಜಿ ಸಂಘಟನೆಗಳ ಒಕ್ಕೂಟದ(ಎಫ್‍ಎಚ್‍ಎಕೆ) ಪ್ರತಿನಿಧಿಯನ್ನು ಒಳಗೊಂಡಂತೆ 8 ಮಂದಿ ಸದಸ್ಯರ ದರ ನಿಗದಿ ಸಮಿತಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬದ ರೋಗಿಗಳಿಗೆ ಕ್ರಮವಾಗಿ ಸಾಮಾನ್ಯ ವಾರ್ಡ್‍ಗೆ 5,200, ಆಮ್ಲಜನಕ ಸಹಿತ ವಾರ್ಡ್ ಗೆ 7 ಸಾವಿರ, ತೀವ್ರ ನಿಗಾ ಘಟಕಕ್ಕೆ 8,500 ಹಾಗೂ ವೆಂಟಿಲೇಟರ್ ಸಹಿತ ಐಸಿಯುವಿಗೆ 10 ಸಾವಿರ ಶುಲ್ಕಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಆದರೆ, ಸಾಮಾನ್ಯ ರೋಗಿಗಳಿಗೆ ಪ್ರಸ್ತಾಪಿಸಿದ ಶುಲ್ಕದಲ್ಲಿ ಶೇ. 20 ರಷ್ಟು ಕಡಿತ ಮಾಡುವಂತೆ ಸೂಚಿಸಲಾಗಿತ್ತು. ಕೋವಿಡ್ ಕಾರ್ಯಪಡೆ ಕೂಡ ಸಮಿತಿಯ ಶಿಫಾರಸ್ಸಿಗೆ ಸಹಮತಿ ಸೂಚಿಸಿತ್ತು. ಅದರಂತೆ ಶುಲ್ಕವನ್ನು ಇಳಿಕೆ ಮಾಡಲಾಗಿದೆ.

ರಾಜ್ಯಾದ್ಯಂತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ 518 ಖಾಸಗಿ ವೈದ್ಯಕೀಯ ಕಾಲೇಜುಗಳು ಹಾಗೂ ಆಸ್ಪತ್ರೆಗಳು ನೋಂದಾವಣಿಯಾಗಿವೆ. ಆದರೆ, ಸರಕಾರ ನಿಗದಿ ಮಾಡಿರುವ ಎಲ್ಲ ನಿಯಮಾವಳಿಗಳು ಖಾಸಗಿ ಆಸ್ಪತ್ರೆಗಳಿಗೂ ಅನ್ವಯವಾಗಲಿವೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಹಾಸಿಗೆಗಳು ಮೀಸಲು: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಶೇ.50 ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು ಹಾಗೂ ಶೇ.50 ರಷ್ಟು ಹಾಸಿಗೆಗಳನ್ನು ಸರಕಾರಿ ಆಸ್ಪತ್ರೆಗಳಿಂದ ಶಿಫಾರಸು ಮಾಡುವ ರೋಗಿಗಳಿಗಾಗಿ ಮೀಸಲಿಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ (ದಿನಕ್ಕೆ)

ಚಿಕಿತ್ಸಾ ವಿಧಾನ-  ಆಯುಷ್ಮಾನ್ ಫಲಾನುಭವಿ- ಸಾಮಾನ್ಯ ರೋಗಿ

ಸಾಮಾನ್ಯ ವಾರ್ಡ್- 5,200 - 10,000

ಆಮ್ಲಜನಕ ಸಹಿತ ವಾರ್ಡ್-  7,500 - 12,000

ಐಸಿಯು ಹಾಸಿಗೆ- 8,500 - 15,000

ವೆಂಟಿಲೇಟರ್ ಸಹಿತ ಐಸಿಯು- 10,000 -25,000

share
ವಾರ್ತಾಭಾರತಿ
ವಾರ್ತಾಭಾರತಿ
Next Story
X