ಬೈಂದೂರು: ಭಾರೀ ಮಳೆ; ಎರಡು ಮನೆಗಳಿಗೆ ಭಾರೀ ಹಾನಿ
ಉಡುಪಿ : ಸೋಮವಾರ ಸುರಿದ ಮಳೆಯಿಂದಾಗಿ ಬೈಂದೂರು ತಾಲೂಕಿನ ಎರಡು ಮನೆಗಳಿಗೆ ಅಪಾರ ಹಾನಿಯಾಗಿದೆ. ಬೈಂದೂರು ಗ್ರಾಮದ ರಾಮ ಮೊಗವೀರ ಎಂಬವರ, ಶಿರೂರು ಗ್ರಾಮದ ಹಡವಿನಕೋಣೆ ಸಾಕು ಮೇಸ್ತರ ವಾಸ್ತವ್ಯದ ಪಕ್ಕಾ ಮನೆಗೆ ಮಳೆಯಿಂದ ಭಾಗಶ: ಹಾನಿಯಾಗಿದ್ದು, ತಲಾ 50 ಸಾವಿರ ರೂ.ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಕಾಪು ತಾಲೂಕಿನ ಕುತ್ಯಾರು ಗ್ರಾಮದ ಕರುಣಾಕರ ಮೇಲಂತರ ಮನೆಗೆ ಸಿಡಿಲು ಬಡಿದು ಭಾಗಶ: ಹಾನಿಯಾಗಿದ್ದು 25,000ರೂ. ಪಡು ಗ್ರಾಮದ ಭಾರತಿ ಎಂಬವರ ಮನೆ ಮೇಲೆ ಮರಬಿದ್ದು ಹಾನಿಯಾಗಿದೆ. ಅಲ್ಲದೇ ಕಾರ್ಕಳ ತಾಲೂಕು ಸೂಡ ಗ್ರಾಮದ ಸುಧಾಕರ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ಹತ್ತು ಸಾವಿರ ರೂ.ಗಳಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ನಿಯಂತ್ರಣ ಕಚೇರಿಯ ವರದಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 22.67ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ 22 ಮಿ.ಮೀ, ಕುಂದಾಪುರದಲ್ಲಿ 33 ಹಾಗೂ ಕಾರ್ಕಳದಲ್ಲಿ 13 ಮಿ.ಮೀ. ಮಳೆಯಾದ ಬಗ್ಗೆ ವರದಿಯಾಗಿದೆ.
Next Story





