ಕ್ರೀಡಾ ಇಲಾಖೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.23:2019ನೇ ಸಾಲಿಗೆ ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳ/ಹಿರಿಯ ಕ್ರೀಡಾಪಟುಗಳ/ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಜು.10 ಕೊನೆಯ ದಿನವಾಗಿದ್ದು, ಅರ್ಹ ಕ್ರೀಡಾಪಟುಗಳು-https://sevasindhu.karnataka.gov.in - ನಲ್ಲಿ ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ (0820-2521324, 9480886467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





