ಬೆಂಗಳೂರು: ಐವರು ಪೊಲೀಸರಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಜೂ.23: ಸಿಸಿಬಿಯ ಓರ್ವ ಸಿಬ್ಬಂದಿ ಹಾಗೂ ಮಾರತಹಳ್ಳಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಸೇರಿದಂತೆ ಐದು ಮಂದಿಗೆ ಇಂದು ಕೊರೋನ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಇಲ್ಲಿನ ಮಾರತಹಳ್ಳಿ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗೆ ಕೊರೋನ ಸೋಂಕು ತಗಲಿದ್ದು, ಸರಕಾರದ ಮಾರ್ಗದರ್ಶನದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಸಿಸಿಬಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕನಿಗೆ ಕೊರೋನ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಇದುವರೆಗೂ ಈ ವಿಭಾಗದ 6 ಪೊಲೀಸರಿಗೆ ಕೊರೋನ ಸೋಂಕು ತಗಲಿದೆ. ಚಾಲಕನ ಸಂಪರ್ಕದಲ್ಲಿರುವ ಸಿಸಿಬಿ ಇನ್ಸ್ ಪೆಕ್ಟರ್ ಸೇರಿ 15 ಜನ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
Next Story





