ಮಂಗಳೂರು: ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿ ಬಳಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುರತ್ಕಲ್ ಹೊಸಬೆಟ್ಟು ಮಾರುತಿನಗರ ನಿವಾಸಿ ವಿಶಾಖ್ ಐತಾಳ್ (20) ಮೃತ ವಿದ್ಯಾರ್ಥಿ.
ಈತನು ಸುರತ್ಕಲ್ ಕಡೆಯಿಂದ ಕೆಪಿಟಿ ಕಡೆಗೆ ಬೈಕ್‌ನಲ್ಲಿ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹೋಗುತ್ತಿದ್ದ. ಈ ಸಂದರ್ಭ ವಿರುದ್ಧ ದಿಕ್ಕಿನಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಬೈಕ್ ಸವಾರನ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ವಿಶಾಖ್ ಐತಾಳ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





