Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ...

ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2020 9:45 PM IST
share
ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜೂ. 23: ಕೊರೋನ ಸೋಂಕಿತರಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು. ಜೊತೆಗೆ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೋಕಾಲ್ ಜಾರಿಗೆ ತರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಂಗಳವಾರ ರಾಜ್ಯ ಸರಕಾರ ಕೊರೋನ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೋಕಾಲ್ ಜಾರಿಯಾಗುತ್ತಿರುವ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸರಣಿ ವೈಫಲ್ಯಗಳಿಂದಾಗಿ ಕೊರೋನ ಸೋಂಕು ತೀವ್ರಗತಿಯಲ್ಲಿ ಏರುತ್ತಿದೆ. ಪ್ರಧಾನಿ ಪೂರ್ವ ಸಿದ್ಧತೆ ಇಲ್ಲದೆ, ಮಾರ್ಚ್ 24ರಂದು ರಾತ್ರಿ ಲಾಕ್‍ಡೌನ್ ಘೋಷಣೆ ಮಾಡಿದ್ದು, ಅನಂತರ ನಡೆದದ್ದು ಎಲ್ಲರಿಗೂ ಗೊತ್ತಿದೆ. ಮಾರ್ಚ್ ತಿಂಗಳಲ್ಲಿ ಲಾಕ್ ಡೌನ್ ಅಗತ್ಯವೇ ಇರಲಿಲ್ಲ. ಅವಿವೇಕಿತನದ ತೀರ್ಮಾನದಿಂದಾಗಿ ಕೋಟ್ಯಂತರ ಕಾರ್ಮಿಕರು, ಕುಶಲಕರ್ಮಿ ಸಮುದಾಯಗಳು, ರೈತಾಪಿ ವರ್ಗದವರು ಕಷ್ಟಪಟ್ಟರು ಎಂದು ವಿಷಾದ ವ್ಯಕ್ತಪಡಿಸಿದರು.

ಗರಿಷ್ಟ ಮೊತ್ತದ ನೋಟು ರದ್ದತಿ, ಜಿಎಸ್ಪಿಗಳ ಅಸಮರ್ಪಕ ಅನುಷ್ಟಾನದಿಂದ ಲಕ್ವಾ ಹೊಡೆದಂತಾಗಿದ್ದ ದೇಶದ ಆರ್ಥಿಕತೆಗೆ ಲಾಕ್‍ಡೌನ್‍ನಿಂದಾಗಿ ಉತ್ಪಾದಕ ವಲಯಗಳು ಇದ್ದಬದ್ದ ಚೈತನ್ಯವನ್ನು ಕಳೆದುಕೊಂಡಿವೆ. ಕೊರೋನ ಸೋಂಕು ಸಮುದಾಯದ ಸೋಂಕಾಗಿ ವ್ಯಾಪಿಸಿಕೊಂಡಿದೆ. ಸರಿಯಾದ ತಪಾಸಣೆಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಜನರ ದುಡಿಮೆಯ ಅವಕಾಶಗಳೆಲ್ಲ ಮುಚ್ಚಿ ಹೋಗಿವೆ. ಅಸಂಖ್ಯಾತ ಕಾರ್ಮಿಕರು, ನೌಕರರು ಕಾರ್ಖಾನೆ ಮತ್ತು ಕಂಪೆನಿಗಳು ಕೆಲಸದಿಂದ ತೆಗೆದು ಹಾಕಿವೆ. ಜನರ ಬಳಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರ ಕೊರೋನ ಸೋಂಕಿತರ ಚಿಕಿತ್ಸೆಗೆ ದರ ನಿಗದಿ ಮಾಡಿರುವುದನ್ನು ನೋಡಿದರೆ ಮೇಲ್ಮಧ್ಯಮ ವರ್ಗಗಳಿಗೆ ಆಘಾತ ತರುವಂತಿದೆ ಎಂದು ಸಿದ್ಧರಾಮಯ್ಯ ಹೇಳಿದರು.

ಕೊರೋನ ಸೋಂಕು ಕುಟುಂಬದೊಳಗೆ ವ್ಯಾಪಿಸಿದರೆ ಸಾಮಾನ್ಯ ಕುಟುಂಬದ ಸದಸ್ಯರೆಲ್ಲರನ್ನು ಬಾಧಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ದರ ನಿಗದಿ ಮಾಡಿದ್ದು, ಜನ ಎಲ್ಲಿಂದ ನೀಡಲು ಸಾಧ್ಯ? ಸರಕಾರ ನಿಗದಿಪಡಿಸಿರುವ ದರವನ್ನು ನೋಡಿದರೆ ಜನರಿಗೆ ಹೃದಯಾಘಾತವಾಗುವಂತಿದೆ. ಇದನ್ನು ಗಮನಿಸಿದರೆ ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಜೀವಂತವಾಗಿಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ವಾಗ್ದಾಳಿ ನಡೆಸಿದರು.

ಜನರ ಬಗ್ಗೆ ಕಾಳಜಿ ಇರುವ ಸರಕಾರ ಮಾಡುವ ಕೆಲಸವೇ ಇದು? ಒಂದು ಕುಟುಂಬದ ನಾಲ್ಕೈದು ಮಂದಿ ಸದಸ್ಯರು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುವ ಅನಿವಾರ್ಯ ಉಂಟಾದರೆ ಎಲ್ಲಿಂದ 10ರಿಂದ 12 ಲಕ್ಷ ರೂ.ತರಲು ಸಾಧ್ಯ? ಎಂದು ಪ್ರಶ್ನಿಸಿದ ಅವರು, ಜನತೆಗೆ ಒಂದು ಕಡೆ ಹಣ ಹೊಂದಿರುವ ಸಮಸ್ಯೆಯಾದರೆ, ಮತ್ತೊಂದು ಕಡೆ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆ ನೀಡಲು ಜಾಗವೇ ಇಲ್ಲದೆ ತುಂಬಿ ಹೋಗಿವೆ ಎಂಬ ಮಾಹಿತಿ ಬರುತ್ತಿದೆ ಎಂದರು.

ಕೇಂದ್ರ ಸರಕಾರಕ್ಕೆ ಸುಮಾರು 35 ಸಾವಿರ ವೆಂಟಿಲೇಟರ್ ಗಳನ್ನು ಕೇಳಿದರೆ, ಕೇಂದ್ರ ಸರಕಾರ ಕೇವಲ 90 ವೆಂಟಿಲೇಟರ್ ಗಳನ್ನು ಪೂರೈಕೆ ಮಾಡಿರುವ ಮಾಹಿತಿ ಇದೆ. ಸೂಕ್ತ ವೈದ್ಯಕೀಯ ಸಲಕರಣೆಗಳಿಲ್ಲ ಎಂದ ಅವರು, ಕೊರೋನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳೇ ಭರಿಸಬೇಕು ಎಂದು ಆಗ್ರಹಿಸಿದರು.

ಸರಕಾರ ದರ ನಿಗದಿಯಿಂದ ಹಣ ಇದ್ದವರಿಗೆ ಮಾತ್ರ ವೆಂಟಿಲೇಟರ್ ಸೌಲಭ್ಯ ಪಡೆಯುತ್ತಾರೆ. ಸೋಂಕು ತಗುಲಿ ಬದುಕುವ ಶಕ್ತಿ ಇದ್ದು ಹಣವಿಲ್ಲದ ಬಡ-ಮಧ್ಯಮ ವರ್ಗದವರು ವೆಂಟಿಲೇಟರ್ ಸೌಲಭ್ಯ ಪಡೆಯಲಾಗದೆ ಮರಣ ಹೊಂದಿದರೆ ಸರಕಾರ ಕೊಲೆಗಡುಕನ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಹೀಗಾಗಿ ಸರಕಾರ ಉಚಿತವಾಗಿ ಚಿಕಿತ್ಸೆ ನೀಡುವ ಘೋಷಣೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಚಿಕಿತ್ಸೆಯ ಶಿಷ್ಟಾಚಾರ ಸರಿಯಾಗಿ ಪಾಲನೆಯಾಗುತ್ತಿದೆಯೇ ಎಂಬುದನ್ನು ನಿರಂತರವಾಗಿ ಪರಿಶೀಲಿಸಲು ಸರಕಾರ ತಜ್ಞರ ಸಮಿತಿ ನೇಮಿಸಬೇಕು. ಜನಸಾಮಾನ್ಯರು ಆತಂಕವಿಲ್ಲದೆ ಚಿಕಿತ್ಸೆ ಪಡೆಯುವಂತಹ ನಿರ್ಭೀತ ವಾತಾವರಣ ಸೃಷ್ಟಿಸಬೇಕು'

-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X