ಕೊರೋನವೈರಸ್: ದೇಶದಲ್ಲಿ ಒಂದೇ ದಿನ ಗರಿಷ್ಠ ಪ್ರಕರಣ ಪತ್ತೆ

ಹೊಸದಿಲ್ಲಿ, ಜೂ.24: ದೇಶದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15,968 ಜನರಲ್ಲಿ ಸೋಂಕು ದೃಢಪಟ್ಟಿತ್ತು. ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಒಟ್ಟು 465 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬೆಳಗ್ಗೆ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,56,183 ತಲುಪಿದ್ದು, ಮೃತರ ಸಂಖ್ಯೆ 14,476ಕ್ಕೆ ಏರಿಕೆಯಾಗಿದೆ. ಈ ವರೆಗೆ 2,58,685 ಮಂದಿ ಗುಣಮುಖರಾಗಿದ್ದು, ಪ್ರಸ್ತುತ 1,83,022 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದ್ದು, 6,531 ಮಂದಿ ಮೃತಪಟ್ಟಿದ್ದಾರೆ. ದಿಲ್ಲಿಯಲ್ಲಿ 66,602 ಮಂದಿಗೆ ಸೋಂಕು ತಗಲಿದ್ದು, 2301 ಮಂದಿ ಅಸುನೀಗಿದ್ದಾರೆ.
Next Story





