ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ
ಉಡುಪಿ, ಜೂ.24: ತೈಲಬೆಲೆ ಏರಿಕೆಯನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಡುಪಿ ನಗರ ಘಟಕದ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ತೀವ್ರವಾದ ಪ್ರತಿಭಟನೆಯೊಂದನ್ನು ನಾಳೆ ಅಪರಾಹ್ನ 3 ಗಂಟೆಗೆ ಮಣಿಪಾಲ ದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ, ಜಿಲ್ಲಾ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ, ಉಪಾಧ್ಯಕ್ಷರಾದ ಪ್ರಸಾದ ಕರ್ಕಡ ಹಾಗೂ ಶಾಹಿದ್ ಅಲಿ ಭಾಗವಹಿಸಲಿದ್ದಾರೆ ಕೆಆರ್‌ಎಸ್ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
Next Story





