ಎಸೆಸೆಲ್ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ, ಜೂ.24: ಜಿಲ್ಲೆಯಲ್ಲಿ ಜೂ.25ರಿಂದ ಜು.4ರವರೆಗೆ ನಡೆಯುವ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆ ನಡೆಯುವ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ, ಅಕ್ರಮಗಳು ನಡೆಯದಂತೆ, ಎಲ್ಲಾ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ, ಪಾರ ದರ್ಶಕವಾಗಿ ಹಾಗೂ ಶಾಂತಿಯುತ ರೀತಿಯಲ್ಲಿ ನಡೆಸಲು ಅನುಕೂಲವಾಗುವಂತೆ ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ನಿಷೇಧಾಜ್ಞೆ ಘೋಷಿಸಿದ್ದಾರೆ.
ಪರೀಕ್ಷೆಗಳು ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸಹ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Next Story





