Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆ : ಉಳ್ಳಾಲ ಪಿಎಸ್ಸೈ ಸಹಿತ...

ದ.ಕ. ಜಿಲ್ಲೆ : ಉಳ್ಳಾಲ ಪಿಎಸ್ಸೈ ಸಹಿತ 12 ಮಂದಿಗೆ ಕೊರೋನ ಪಾಸಿಟಿವ್

► ಪ್ರಯಾಣ ಇತಿಹಾಸ ಇಲ್ಲದ ಎಂಟು ಮಂದಿಗೆ ಸೋಂಕು ► ಒಂದೇ ದಿನ 45 ಮಂದಿ ಗುಣಮುಖರಾಗಿದ್ದು ಇದೇ ಮೊದಲು

ವಾರ್ತಾಭಾರತಿವಾರ್ತಾಭಾರತಿ24 Jun 2020 8:55 PM IST
share
ದ.ಕ. ಜಿಲ್ಲೆ : ಉಳ್ಳಾಲ ಪಿಎಸ್ಸೈ ಸಹಿತ 12 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜೂ. 24: ದ.ಕ. ಜಿಲ್ಲೆಯಲ್ಲಿ ಸತತ 2ನೇ ದಿನವೂ ಕೊರೋನದಿಂದಾಗಿ 57 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಈ ನಡುವೆ ಹೊಸದಾಗಿ 12 ಮಂದಿಗೆ ಕೊರೋನ ದೃಢಪಟ್ಟಿದ್ದು, ಇವರಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ಸೈ ಕೂಡ ಸೇರಿದ್ದಾರೆ.

ಇದೇ ಮೊದಲ ಬಾರಿಗೆ ಒಂದೇ ದಿನ 45 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆತಂಕದ ನಡುವೆಯೂ ಆಶಾಭಾವನೆ ಗರಿಗೆದರಿದೆ.
ಉಳ್ಳಾಲ ಪೊಲೀಸ್ ಠಾಣಾ ಎಸ್‌ಐ ಸೇರಿದಂತೆ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ.

ಬುಧವಾರ ದೃಢಪಟ್ಟ ಪ್ರಕರಣಗಳ ಪೈಕಿ ನಾಲ್ಕು ಮಂದಿ (29 ವರ್ಷದ ಯುವಕ, 25, 51, 24 ವರ್ಷದ ಮಹಿಳೆಯರು) ಶಾರ್ಜಾದಿಂದ ಬಂದು ಕ್ವಾರಂಟೈನ್ ಇದ್ದವರಾಗಿದ್ದರೆ, ಉಳಿದ ಎಂಟು ಮಂದಿಗೆ ಪ್ರಯಾಣ ಇತಿಹಾಸವೇ ಇಲ್ಲದೆ ಸೋಂಕು ಹರಡಿದೆ. ಮೂಲವೇ ಗೊತ್ತಾಗದೆ ಒಂದೇ ದಿನ ಇಷ್ಟು ಮಂದಿಗೆ ಸೋಂಕು ಹರಡಿದ್ದು ಜಿಲ್ಲೆಯಲ್ಲಿ ಇದೇ ಮೊದಲು. ಇವರಲ್ಲಿ ಏಳು ಮಂದಿ ಮಂಗಳೂರು ನಿವಾಸಿಗಳಾಗಿದ್ದರೆ, ಒಬ್ಬರು ಪುತ್ತೂರಿನವರು, ಎಲ್ಲರೂ ಪುರುಷರೇ ಆಗಿದ್ದಾರೆ.

ಪ್ರಸ್ತುತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 155 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಬಹುತೇಕರ ಆರೋಗ್ಯ ಸ್ಥಿರವಾಗಿದೆ. ಕೋವಿಡ್ ಸೋಂಕಿತ ನ್ಯುಮೋನಿಯಾದಿಂದ ಬಳಲುತ್ತಿರುವ 41 ವರ್ಷದ ವ್ಯಕ್ತಿ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 57 ವರ್ಷದ ಮಹಿಳೆಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

45 ಮಂದಿ ಗುಣಮುಖ: ಇದೇ ಮೊದಲ ಬಾರಿಗೆ ಒಂದೇ ದಿನ ದೊಡ್ಡ ಸಂಖ್ಯೆಯಲ್ಲಿ (45 ಮಂದಿ) ಕೊರೋನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡು ವರ್ಷದ ಮಗುವಿನಿಂದ ಹಿಡಿದು 61 ವರ್ಷದ ಹಿರಿಯ ನಾಗರಿಕರೊಬ್ಬರು ಕೂಡ ಗುಣಮುಖರಾಗಿ ದ್ದಾರೆ. ಬಿಡುಗಡೆಗೊಂಡ ಬಹುತೇಕರು ಯುವಕರೇ ಆಗಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು 301 ಮಂದಿ ಗುಣಮುಖರಾದಂತಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಗೂ ಕಾಲಿಟ್ಟ ಕೊರೋನ !

ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಗೂ ಕೊರೋನ ಸೋಂಕು ದಾಳಿ ಇಟ್ಟಿದ್ದು, ಇಲ್ಲಿನ ಪೋಲಿಸ್ ಅಧಿಕಾರಿಗೆ ಕೊರೋನ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.

ಉಳ್ಳಾಲ ಠಾಣೆಯಲ್ಲಿ ಪಿಎಸ್ಸೈ ಒಬ್ಬರಿಗೆ ಕೊರೋನ ಸೋಂಕು ತಗುಲಿದೆ. ಕೇರಳ ಗಡಿಭಾಗ ತಲಪಾಡಿಯ ಚೆಕ್‌ಪೋಸ್ಟ್ ಕರ್ತವ್ಯ ನಿರ್ವಹಿಸಿದ್ದರು. ಅಲ್ಲಿಂದಲೇ ಈ ಸೋಂಕು ಹರಡಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಪಿಎಸ್ಸೈಯಲ್ಲಿ ಕೊರೋನ ಸೋಂಕು ಪತ್ತೆಯಾದ ಕಾರಣ ಉಳ್ಳಾಲ ಠಾಣೆಯನ್ನು ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಠಾಣೆಯ ಉಪ ನಿರೀಕ್ಷಕರಲ್ಲಿ ಕೊರೋನ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಠಾಣೆಯ 50ಕ್ಕೂ ಅಧಿಕ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಈ ಘಟನಾವಳಿಗಳಿಂದ ಪೊಲೀಸ್ ಸಿಬ್ಬಂದಿಯ ಮನೆಯವರು ಆತಂಕಕ್ಕೊಳಗಾಗಿದ್ದಾರೆ. ಪೊಲೀಸರಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುವ ಭೀತಿ ಉಂಟಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಉಳ್ಳಾಲದಲ್ಲಿ ಮತ್ತೆ ಕೊರೋನ ಆತಂಕ ಮನೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X