Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ...

ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ವಿಚಾರ: ಪರಿಹಾರ, ಪುನರ್ವಸತಿ ಕಲ್ಪಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ24 Jun 2020 10:41 PM IST
share
ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ವಿಚಾರ: ಪರಿಹಾರ, ಪುನರ್ವಸತಿ ಕಲ್ಪಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಜೂ.24: ಲಾಕ್‍ಡೌನ್ ಜಾರಿ ಸಂದರ್ಭದಲ್ಲಿ ನಗರದ ಕಾಚರನಹಳ್ಳಿಯ ಸಂಡೆ ಬಜಾರ್ ಪ್ರದೇಶದಲ್ಲಿ ದುರ್ಷರ್ಮಿಗಳು ಸುಟ್ಟು ಹಾಕಿದ ಕಾರ್ಮಿಕರ ಗುಡಿಸಲುಗಳಿಗೆ ಪರಿಹಾರ ಹಾಗೂ ಪುನರ್ವಸತಿಯನ್ನು ಕಲ್ಪಿಸಿಕೊಡುವಂತೆ ಹೈಕೋರ್ಟ್ ಸರಕಾರಕ್ಕೆ ನಿರ್ದೇಶಿಸಿದೆ.  

ಕಾರ್ಮಿಕರ ಗುಡಿಸಲುಗಳು ಬೆಂಕಿಗಾಹುತಿಯಾದ ಕುರಿತು ವಕೀಲೆ ವೈಶಾಲಿ ಹೆಗ್ಡೆ ಬರೆದ ಪತ್ರ ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಲಾಕ್‍ಡೌನ್ ಸಂದರ್ಭದಲ್ಲಿ ಗುಡಿಸಲುಗಳಿಗೆ ಬೆಂಕಿ ಹಚ್ಚಿರುವುದನ್ನು ಗಮನಿಸಿದರೆ ಕೃತ್ಯದ ಹಿಂದೆ ದೊಡ್ಡ ವ್ಯಕ್ತಿಗಳ ಕೈವಾಡ ಇದ್ದಂತೆ ಕಾಣಿಸುತ್ತದೆ. ಜತೆಗೆ ಸಂವಿಧಾನದ 21ನೇ ವಿಧಿಯ ಅನ್ವಯ ಗುಡಿಸಲು ವಾಸಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದಿತು.

ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಉಳಿದಿರುವ ಗುಡಿಸಲುಗಳನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಬೆಂಕಿಗಾಹುತಿಯಾದ ಗುಡಿಸಲುಗಳಲ್ಲಿ ಕಾರ್ಮಿಕರು ಕಳೆದುಕೊಂಡಿರುವ ವಸ್ತುಗಳಿಗೆ ಪರಿಹಾರ ನೀಡಬೇಕು ಮತ್ತು ಪುನರ್ವಸತಿ ಕಲ್ಪಿಸಬೇಕು. ಈ ಕುರಿತು ಕ್ರಮ ಕೈಗೊಂಡ ಬಗ್ಗೆ ಮುಂದಿನ ವಿಚಾರಣೆ ವೇಳೆ ಲಿಖಿತ ವರದಿ ನೀಡಬೇಕು ಎಂದು ಪೀಠ ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಸರಕಾರ ಪರ ವಕೀಲ ವಿಕ್ರಮ್ ಹುಯಿಲ್ಗೋಳ ಅವರು ಪೀಠಕ್ಕೆ ಮಾಹಿತಿ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ: ಕಳೆದ ಮಾರ್ಚ್ 28 ಮತ್ತು 30 ರಂದು ನಗರದ ಕಾಚರಕನಹಳ್ಳಿ ಸಮೀಪದ ಕೊಳಗೇರಿ ಪ್ರದೇಶದಲ್ಲಿದ್ದ 90ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದವು. ಈ ಕುರಿತು ಮೇ 29ರಂದು ವಕೀಲೆ ವೈಶಾಲಿ ಹೆಗಡೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು.

ಲಾಕ್‍ಡೌನ್ ಸಡಿಲಗೊಂಡ ಸಂದರ್ಭದಲ್ಲಿ ಕಲಬುರಗಿ ಮೂಲದ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದಾಗ ಅವರ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೆಲ ಪ್ರಭಾವಿಗಳು ಅಲ್ಲಿನ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ಅಧಿಕಾರಿಗಳು ಘಟನೆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯವಾಗಿ ಈ ಘಟನೆ ಕಾರ್ಮಿಕರ ಜೀವಿಸುವ ಹಕ್ಕನ್ನು ಕಸಿದುಕೊಂಡಿದೆ. ಹೀಗಾಗಿ ಘಟನೆ ಸಂಬಂಧ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X