ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಕೊರೋನ ಪ್ರಯೋಗಾಲಯ ಸ್ಥಗಿತ
ಬೆಂಗಳೂರು, ಜೂ.24: ನಗರದ ವಿಕ್ಟೋರಿಯಾ ಆಸ್ಪತ್ರೆಯ ಕೊರೋನ ಪ್ರಯೋಗಾಲಯದ ಸಿಬ್ಬಂದಿಯೊಬ್ಬರಿಗೆ ಕೊರೋನ ಸೋಂಕು ತಗುಲಿದ ಹಿನ್ನೆಲೆ ಕೋವಿಡ್ ಪರೀಕ್ಷೆಯನ್ನು ಸ್ಥಗಿತ ಮಾಡಲಾಗಿದೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಪ್ರತಿದಿನ ಒಂದು ಸಾವಿರ ಮಂದಿಯ ಗಂಟಲ ದ್ರವದ ಮಾದರಿಗಳನ್ನು ಪರೀಕ್ಷೆ ಮಾಡುವ ಸಾಮರ್ಥ್ಯ ಹೊಂದಿತ್ತು. ಈಗ ಅಲ್ಲಿ ಮಾದರಿಗಳನ್ನು ಸಂಗ್ರಹಿಸಿ, ನಿಮ್ಹಾನ್ಸ್, ರಾಷ್ಟ್ರೀಯ ವೈರಾಣು ಸಂಸ್ಥೆ(ಎನ್‍ಐವಿ) ಬೆಂಗಳೂರು ಶಾಖೆ ಸೇರಿದಂತೆ ವಿವಿಧ ಪ್ರಯೋಗಾಲಯಗಳಿಗೆ ರವಾನಿಸಲಾಗುತ್ತಿದೆ.
ಪ್ರಯೋಗಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಶನಿವಾರದಿಂದ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಹಾಗಾಗಿ ಪ್ರಯೋಗಾಲಯವನ್ನು ಬಂದ್ ಮಾಡಲಾಗಿದೆ. ಬುಧವಾರದಿಂದ ಪ್ರಯೋಗಾಲಯ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ.

Next Story







