ಶನಿವಾರಸಂತೆ: ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ನಿರ್ಧಾರ
ಕೊರೋನ ವೈರಸ್ ಭೀತಿ
ಕೊಡಗು, ಜೂ.25: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಶನಿವಾರಸಂತೆಯಲ್ಲಿ ಪ್ರತಿದಿನ ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಚೇಂಬರ್ ಆಫ್ ಕಾಮರ್ಸ್ ನಿರ್ಧರಿಸಿದೆ.
ಇಂದು ತುರ್ತು ಸಭೆ ನಡೆಸಿದ ಚೇಂಬರ್ ಆಫ್ ಕಾಮರ್ಸ್, ಶನಿವಾರಸಂತೆ ಸುತ್ತ ಮುತ್ತ ಕೊರೋನ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 10 ದಿನದವರೆಗೆ ಪ್ರತಿದಿನ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಎಲ್ಲಾ ಅಂಗಡಿಗಳು ತೆರೆದು, 12 ಗಂಟೆಯ ನಂತರ ಎಲ್ಲಾ ವರ್ತಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ಮತ್ತು ರವಿವಾರ ಸಂಪೂರ್ಣ ಬಂದ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಾರ್ವಜನಿಕರ ಹಿತದೃಷ್ಠಿಯಿಂದ ಈ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದು ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟಪಡಿಸಿದೆ.
Next Story





