'ಅಮೃತಮತಿ' ಸಿನೆಮಾ ಅಸ್ಟ್ರಿಯಾ ಅಂತರ್ ರಾಷ್ಟ್ರೀಯ ಸಿನೆಮೋತ್ಸವಕ್ಕೆ ಆಯ್ಕೆ
ಬೆಂಗಳೂರು, ಜೂ.25: ಇಂಚರ ಪುಟ್ಟಣ್ಣ ಪ್ರೊಡಕ್ಷನ್ ನಿರ್ಮಾಣದ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಅಮೃತಮತಿ ಕನ್ನಡ ಸಿನೆಮಾ ಅಸ್ಟ್ರಿಯಾ ಅಂತರ್‍ರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಆನ್‍ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದ್ದು, ಜು.22ರಿಂದ ಆಗಸ್ಟ್ 5ರವರೆಗೆ ನಡೆಯಲಿದೆ. ಅಮೃತಮತಿ ಸಿನೆಮಾವು ಚಿತ್ರೋತ್ಸವ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ. ಈ ಚಿತ್ರದಲ್ಲಿ ನಟಿ ಹರಿಪ್ರಿಯಾ, ಬಹುಭಾಷಾ ನಟ ಕಿಶೋರ್, ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್ ಸುಪ್ರಿಯಾರಾವ್, ವತ್ಸಲಾ ಮೋಹನ್, ಅಂಬರೀಶ್ ಸಾರಂಗಿ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಹಿನ್ನೆಲೆಯೂ 13ನೇ ಶತಮಾನದಲ್ಲಿ ಕನ್ನಡದ ಕವಿ ಜನ್ನ ಬರೆದ ಯಶೋಧರ ಚರಿತೆ ಕಾವ್ಯವನ್ನು ಆಧರಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





